ಬಜೆಟ್‌ನಲ್ಲಿ ಹೆಚ್ಚಿನ ಅನುದಾನಕ್ಕೆ ಆಗ್ರಹ

7

ಬಜೆಟ್‌ನಲ್ಲಿ ಹೆಚ್ಚಿನ ಅನುದಾನಕ್ಕೆ ಆಗ್ರಹ

Published:
Updated:

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ  ಅನುದಾನವನ್ನು ಮೀಸಲಿಡಬೇಕು ಎಂದು ಅಖಿಲ ಭಾರತ  ವಿಶ್ವಕರ್ಮ ಸಮಾಜದ  ಬೇಲಿ ಮಠ ಸಂಸ್ಥಾನದ ಮಹೇಂದ್ರ ಸ್ವಾಮೀಜಿ  ಹೇಳಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಮಾರು 67 ಕ್ಕೂ ಹೆಚ್ಚು ವಿಶ್ವಕರ್ಮ ಮಠ ಗಳ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ. ಇವುಗಳಿಗೆ ಆರ್ಥಿಕ ನೆರವು ನೀಡ ಬೇಕು.ಪ್ರತಿ ವರ್ಷ ಸೆ. 17 ರಂದು ಸಾರ್ವತ್ರಿಕ ರಜೆ, ಸರ್ಕಾರದಿಂದಲೇ ವಿಶ್ವಕರ್ಮ ಪೂಜಾ ಮಹೋತ್ಸವ ಆಚರಿಸಬೇಕು,  ಶಿಕ್ಷಣ ಸಂಸ್ಥೆಗಳ ನಿರ್ಮಾಣಕ್ಕೆ ಜಮೀನು, ಹಂಪಿ  ಕನ್ನಡ ವಿ.ವಿಯಲ್ಲಿ ಅಮರಶಿಲ್ಪಿ ಜಕಣಾಚಾರ್ಯ ಅಧ್ಯಯನ ಪೀಠ ಸ್ಥಾಪಿಸುವಂತೆ ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry