ಬಜೆಟ್ ಅಧಿವೇಶನದಲ್ಲಿ ರಾಜಾ ಭಾಗವಹಿಸುವರೆ?

7

ಬಜೆಟ್ ಅಧಿವೇಶನದಲ್ಲಿ ರಾಜಾ ಭಾಗವಹಿಸುವರೆ?

Published:
Updated:

 ನವದೆಹಲಿ (ಐಎಎನ್ಎಸ್): ~2ಜಿ ಸ್ಪೆಕ್ಟ್ರಂ~ ಹಂಚಿಕೆ ಹಗರಣದಲ್ಲಿ ಸಿಲುಕಿ ಈಗ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ರಾಜಾ ಅವರು ಪ್ರಸಕ್ತ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವರೆ?

ರಾಜಾ ಅವರು ಒಂದು ವೇಳೆ ಅಧಿವೇಶನದಲ್ಲಿ ಭಾಗವಹಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಕುರಿತು ಪರಿಶೀಲಿಸುವುದಾಗಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರು ತಿಳಿಸಿದ್ದಾರೆ.

ಅವರು ಮಂಗಳವಾರ ಇಲ್ಲಿ  ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿಗೆ ಹೋಗುವ ಸಂದರ್ಭದಲ್ಲಿ ಎದುರಾದ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.

 

ಸದ್ಯ ಸಿಬಿಐ  ತನಿಖೆಗಾಗಿ ನ್ಯಾಯಾಂಗದ ಬಂಧನದಲ್ಲಿರುವ ಕೇಂದ್ರದ ಮಾಜಿ ಸಚಿವ ಎ. ರಾಜಾ ಅವರು ಇಲ್ಲಿನ ತಿಹಾರ್ ಜೈಲಿನಲ್ಲಿದ್ದಾರೆ.  ಫೆ. 17 ರಿಂದ 14 ದಿನಗಳವರೆಗೆ ಅವರು ನ್ಯಾಯಾಂಗ ಬಂಧನಕ್ಕೊಳಗಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry