ಬೆಂಗಳೂರು: `ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ, ಬಜೆಟ್ ಮಂಡನೆ ಸದ್ಯ ನನ್ನ ಮುಂದಿರುವ ಸವಾಲು. ಇದಕ್ಕೆ ಹೆಚ್ಚು ಒತ್ತು ನೀಡುತ್ತಿದ್ದೇನೆ. ಬೇರೆ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ, ಮುಂದೆ ಕೆಡಿಸಿಕೊಳ್ಳುವುದೂ ಇಲ್ಲ~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದರು.

ಗೋವಾಗೆ ತೆರಳುವ ಮುನ್ನ ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಈಗ ಚುನಾವಣಾ ಪ್ರಚಾರ ಮತ್ತು ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದೇನೆ. ಬಜೆಟ್ ಅಧಿವೇಶನ ಮುಗಿಯುವವರೆಗೂ ದೆಹಲಿಗೆ ತೆರಳುವುದಿಲ್ಲ~ ಎಂದರು.

`ಬಜೆಟ್ ಮಂಡನೆ ಮತ್ತು ಉಪ ಚುನಾವಣೆಯ ಗೆಲುವು ಸವಾಲಿನ ಕೆಲಸವಾಗಿದೆ. ಹೀಗಾಗಿ ಈ ಎರಡೂ ವಿಷಯಗಳಿಗೆ ಹೆಚ್ಚಿನ ಒತ್ತು ಕೊಟ್ಟಿದ್ದೇನೆ. ರಾಜಕೀಯ ಚಟುವಟಿಕೆಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅದರ ಅಗತ್ಯವೂ ನನಗಿಲ್ಲ. ಪಕ್ಷದ ಅಧ್ಯಕ್ಷರು ಹಾಗೂ ವರಿಷ್ಠರು ಅದನ್ನು ನೋಡಿಕೊಳ್ಳುತ್ತಾರೆ~ ಎಂದು ತಿಳಿಸಿದರು.

`ಹುಬ್ಬಳ್ಳಿಯಲ್ಲಿ ಇದೇ 11ರಂದು ನಡೆಯುವ ಯಡಿಯೂರಪ್ಪ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಆಹ್ವಾನಿಸಿದ್ದಾರೆ.

ಪೂರ್ವ ನಿಗದಿತ ಕಾರ್ಯಕ್ರಮಗಳು ಇರುವುದರಿಂದ ಪಾಳ್ಗೊಳ್ಳುವುದು ಕಷ್ಟ. ಸಾಧ್ಯವಾದರೆ ಬರುವುದಾಗಿ ತಿಳಿಸಿದ್ದೇನೆ~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.