ಗುರುವಾರ , ಮೇ 26, 2022
30 °C

ಬಟ್ಟಿ ಹತ್ಯೆ: ಮೂರು ದಿನಗಳ ಶೋಕಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಟ್ಟಿ ಹತ್ಯೆ: ಮೂರು ದಿನಗಳ ಶೋಕಾಚರಣೆ

ಇಸ್ಲಾಮಾಬಾದ್ (ಪಿಟಿಐ):
ಪಾಕಿಸ್ತಾನದ ಅಲ್ಪಸಂಖ್ಯಾತ ವ್ಯವಹಾರ ಸಚಿವ ಶಹಬಾಜ್ ಬಟ್ಟಿ ಅವರ ಹತ್ಯೆಯ ಹಿನ್ನೆಲೆಯಲ್ಲಿ  ಪ್ರಧಾನಿ ಯೂಸುಫ್ ರಾಜಾ ಗಿಲಾನಿ ಮೂರು ದಿನಗಳ ಅಧಿಕೃತ ಶೋಕಾಚರಣೆ ಘೋಷಿಸಿದ್ದಾರೆ.ಶೋಕಾಚರಣೆಯ ಭಾಗವಾಗಿ ಶುಕ್ರವಾರ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಇಳಿಸಲಾಗುವುದು ಎಂದು ಗಿಲಾನಿ ಹೇಳಿದರು.ಭಟ್ಟಿ ಅವರನ್ನು ಅವರ ಮನೆಯ ಸಮೀಪ ತಾಲಿಬಾನ್ ಉಗ್ರರು ಹತ್ಯೆಗೈದಿದ್ದರು.ರಾಷ್ಟ್ರಧ್ವಜದಲ್ಲಿನ ಬಿಳಿ ಭಾಗವು ಅಲ್ಪಸಂಖ್ಯಾತರನ್ನು ಪ್ರತಿನಿಧಿಸುತ್ತಿದ್ದು, ಅಲ್ಪಸಂಖ್ಯಾತರ ಹಕ್ಕುಗಳನ್ನು ಕಾಯ್ದುಕೊಳ್ಳುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಒತ್ತಿ ಹೇಳುತ್ತದೆ ಎಂದು ಗಿಲಾನಿ ಹೇಳಿಕೆಯೊಂದರಲ್ಲಿ ತಿಳಿಸಿದರು.


 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.