ಬಡವರ ಮೇಲೆ ಬೆಲೆ ಏರಿಕೆ ಬರೆ

ಸೋಮವಾರ, ಮೇ 20, 2019
30 °C

ಬಡವರ ಮೇಲೆ ಬೆಲೆ ಏರಿಕೆ ಬರೆ

Published:
Updated:

ಗುಲ್ಬರ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆ, ಬಡತನ, ನಿರುದ್ಯೋಗ, ಹಣದುಬ್ಬರ ಸಮಸ್ಯೆಗಳಿಂದ ಜನತೆ ತತ್ತರಿಸುತ್ತಿರುವ ಮಧ್ಯೆಯೇ  ಕಾಂಗ್ರೆಸ್ ನೇತೃತ್ವದ ಯು.ಪಿ.ಎ. ಕೇಂದ್ರ ಸರ್ಕಾರವು ಪೆಟ್ರೋಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ   (ಕಮ್ಯುನಿಸ್ಟ್) ಸದಸ್ಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.



ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಎಚ್.ದಿವಾಕರ್, `ಕೇಂದ್ರ ಸರ್ಕಾರವು ಮೂರು ವರ್ಷದಲ್ಲಿ ಒಂಬತ್ತು ಬಾರಿ ತೈಲ ಬೆಲೆ ಏರಿಕೆ ಮಾಡಿದೆ. ಆ ಮೂಲಕ ಜನವಿರೋಧಿ ಸರ್ಕಾರ ಎಂಬುದನ್ನು ಸಾಬೀತು ಮಾಡಿದೆ. ವ್ಯಾಪಕವಾಗಿರುವ ಭ್ರಷ್ಟಾಚಾರದ ನಡುವೆ ಪೆಟ್ರೋಲ್ ಬೆಲೆ ಏರಿಕೆಯು ಜನತೆಗೆ ಇನ್ನಷ್ಟು ಏಟು ನೀಡಿದೆ~ ಎಂದರು.



ತೈಲ ಬೆಲೆಯ ಮೇಲಿನ ಸರ್ಕಾರದ ನಿಯಂತ್ರಣವನ್ನು ತೆಗೆದುಹಾಕುವ ಕೀರ್ತಿ-ಪಾರೇಖ್ ಸಮಿತಿಯ ಶಿಫಾರಸ್ಸನ್ನು ಜಾರಿಗೆ ತರುವ ಮೂಲಕ ಜನಜೀವನದ ಮೇಲೆ ಗಧಾಪ್ರಹಾರ ಮಾಡುತ್ತಿದೆ. ಖಾಸಗಿ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಉದ್ದೇಶಕ್ಕಾಗಿ `ತೈಲ ಕಂಪೆನಿಗಳಿಗೆ ನಷ್ಟ~ ಉಂಟಾಗುತ್ತಿದೆ ಎಂಬ ನೆಪವೊಡ್ಡುತ್ತಿದೆ. ಒಂದೆಡೆ ತೋರಿಕೆಗೆ ತೈಲ ಸರಬರಾಜಿಗೆ ಸಬ್ಸಿಡಿ ನೀಡುವ ಸರ್ಕಾರವು ಇನ್ನೊಂದೆಡೆ ಭಾರಿ ತೆರಿಗೆ ವಿಧಿಸುತ್ತಿದೆ. ಇಂತಹ ದ್ವಂದ್ವ, ನಯವಂಚಕ ನೀತಿಯನ್ನು ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ ಬಿಡಬೇಕು. ಸಾಮಾನ್ಯ ಜನತೆಯ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.  

ಜಿಲ್ಲಾ ಸಮಿತಿ ಸದಸ್ಯೆ ವಿ.ನಾಗಮ್ಮಾಳ್ ಮಾತನಾಡಿದರು.  ರಾಮಣ್ಣ ಎಸ್. ಇಬ್ರಾಹಿಂಪುರ, ಮಹೇಶ್ ಮತ್ತಿತರರು ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry