ಭಾನುವಾರ, ಡಿಸೆಂಬರ್ 8, 2019
25 °C

ಬಡ್ಡಿ ದರ ಏರಿಕೆ: ಪೇಟೆಯಲ್ಲಿ ಒತ್ತಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಡ್ಡಿ ದರ ಏರಿಕೆ: ಪೇಟೆಯಲ್ಲಿ ಒತ್ತಡ

ನವದೆಹಲಿ (ಪಿಟಿಐ): ಭಾರತೀಯ ರಿಸರ್ವ್ ಬ್ಯಾಂಕ್‌ ಅನಿರೀಕ್ಷಿತವಾಗಿ ಬಡ್ಡಿ ದರ ಏರಿಕೆ ಮಾಡಿರುವುದು ಹೂಡಿಕೆದಾ­ರರಲ್ಲಿ ಆತಂಕ ಮತ್ತು ಗೊಂದಲ ಮೂ­ಡಿಸಿದ್ದು, ಈ ವಾರವೂ ಪೇಟೆಯಲ್ಲಿ ಕುಸಿತ ಕಾಣಬಹುದು ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.ವಾಣಿಜ್ಯೋದ್ಯಮ ಸಂಸ್ಥೆಗಳು ‘ಆರ್‌ಬಿಐ’ನ ಬಿಗಿ ಹಣಕಾಸು ನೀತಿಯನ್ನು ಟೀಕಿಸಿವೆ. ಇದರ ಪರಿಣಾಮ ಈ ವಾರ ಪೇಟೆಯಲ್ಲಿ ಕಾಣಿಸಿಕೊಳ್ಳಲಿದೆ ಎಂದು ಬೊನಾಂಜಾ ಪೋರ್ಟ್‌ಪೊಲಿ­ಯೊ ಸಂಸ್ಥೆಯ ಉಪಾಧ್ಯಕ್ಷ ರಾಕೇಶ್‌ ಗೋಯಲ್‌ ಅಭಿಪ್ರಾಯಪಟ್ಟಿದ್ದಾರೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಸೆ.1ರಿಂದ 15ರವರೆಗೆ ಷೇರುಪೇಟೆಯಲ್ಲಿ  ₨11 ಸಾವಿರ ಕೋಟಿ ಬಂಡವಾಳ ತೊಡಗಿಸಿದ್ದಾರೆ.

ಪ್ರತಿಕ್ರಿಯಿಸಿ (+)