ಗುರುವಾರ , ಮೇ 13, 2021
16 °C

ಬಡ್ತಿಯಲ್ಲಿ ತಾರತಮ್ಯ: ಶಿಕ್ಷಕರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡುವ ಸಲುವಾಗಿ ಏರ್ಪಡಿಸಿರುವ ಕೌನ್ಸೆಲಿಂಗ್‌ಗೆ ಸಿದ್ಧಪಡಿಸಿರುವ ಪಟ್ಟಿಯಲ್ಲಿ ಸೇವಾ ಹಿರಿತನ ಕಡೆಗಣಿಸಲಾಗಿದೆ ಎಂದು ಆರೋಪಿಸಿ ಶ್ರೀನಿವಾಸಪುರ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರು ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.2011- 12ನೇ ಸಾಲಿನಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಸೇವಾ ಹಿರಿತನವನ್ನು ಪರಿಗಣಿಸಿ ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡುವ ಸಲುವಾಗಿ ಕೌನ್ಸೆಲಿಂಗ್ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ನಿಗದಿಯಾಗಿದ್ದ ಕೌನ್ಸೆಲಿಂಗ್ ಸಂದರ್ಭದಲ್ಲಿ ತಾರತಮ್ಯ ಕಂಡುಬಂದ ಹಿನ್ನೆಲೆಯಲ್ಲಿ ಪ್ರತಿಭಟಿಸಿದ ಪರಿಣಾಮವಾಗಿ ದಿನಾಂಕ ಮುಂದೂಡಲಾಗಿತ್ತು. ಆದರೆ ಇಂದು ನಡೆಯುತ್ತಿರುವ ಕೌನ್ಸೆಲಿಂಗ್‌ನಲ್ಲಿಯೂ ಕಡಿಮೆ ಅರ್ಹತೆಯುಳ್ಳ ಶಿಕ್ಷಕರಿಗೆ ಪಟ್ಟಿಯಲ್ಲಿ ಆದ್ಯತೆ ನೀಡಲಾಗಿದೆ. ಸೇವಾ ಹಿರಿತನವುಳ್ಳವರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು. ಉಪರ್ದೇಶಕರ ವಿರುದ್ಧ ಧಿಕ್ಕಾರ ಕೂಗಿದರು.ಕೌನ್ಸಿಲಿಂಗ್‌ಗೆ ಅರ್ಹರಿರುವ ಪಟ್ಟಿಯನ್ನು ಮೊದಲಿಗೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಪ್ರಕಟಿಸಬೇಕು. ಆದರೆ ಹಾಗೆ ಮಾಡದೆ ಉಪನಿರ್ದೇಶಕರು ಗುಟ್ಟಾಗಿ ತಮಗೆ ಬೇಕಾದ ಶಿಕ್ಷಕರಿಗೆ ಬಡ್ತಿ ನೀಡಲು ಸಂಚು ರೂಪಿಸಿದ್ದಾರೆ. ತಾಲ್ಲೂಕಿನ ಶಿಕ್ಷಕರ ಸಂಘದ ಪದಾಧಿಕಾರಿ ಶ್ರೀನಿವಾಸರೆಡ್ಡಿ ಅವರಿಗೆ ಬಡ್ತಿ ನೀಡುತ್ತಿರುವುದು ಸರಿಯಲ್ಲ ಎಂದು ಆರೋಪಿಸಿದರು. ಶಿಕ್ಷಕರಾದ ಎಂ.ನಾಗರಾಜು, ಮುರಳಿಬಾಬು, ಎಂ.ಶಂಕರಪ್ಪ, ವೆಂಕಟರಾಮಪ್ಪ, ನಾರಾಯಣಸ್ವಾಮಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.