ಮಂಗಳವಾರ, ಜೂನ್ 22, 2021
28 °C

ಬಡ ಕುಟುಂಬಗಳಿಗೆ 370 ಮನೆ ಮಂಜೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಗಳೂರು:  ಪಂಚಾಯ್ತಿ ವ್ಯಾಪ್ತಿಯ 10 ಹಳ್ಳಿಗಳ ಬಡ ಕುಟುಂಬಗಳಿಗೆ ಪ್ರಸಕ್ತ ವರ್ಷದ ವಸತಿ ಯೋಜನೆಯಲ್ಲಿ ಇದೇ ಮೊದಲ ಬಾರಿ ಅತಿಹೆಚ್ಚು 370 ಮನೆಗಳನ್ನು ನೀಡಲಾಗಿದೆ ಎಂದು ತಾಲ್ಲೂಕಿನ ದೊಣೆಹಳ್ಳಿ ಗ್ರಾ.ಪಂ. ಅಧ್ಯಕ್ಷ ಗುರುಮೂರ್ತಿ ಹೇಳಿದರು.ದೊಣೆಹಳ್ಳಿ ಗ್ರಾಮದಲ್ಲಿ ಮಂಗಳವಾರ ಶಾಸಕ ಎಸ್.ವಿ. ರಾಮಚಂದ್ರ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ 8ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಇಂದಿರಾ ಆವಾಸ್ ಯೋಜನೆಯಡಿ 39, ಬಸವ ವಸತಿ ಯೋಜನೆಯಲ್ಲಿ 312 ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಡಿ 19 ಮನೆಗಳನ್ನು ಅರ್ಹ ಬಡ ಫಲಾನುಭವಿಗಳಿಗೆ ವಿತರಿಸಲಾಗಿದೆ.ಶಾಸಕ ಎಸ್‌ವಿ. ರಾಮಚಂದ್ರ ಅವರು ಪಂಚಾಯ್ತಿ ವ್ಯಾಪ್ತಿಯಲ್ಲಿ ವಸತಿ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಸಾಕಷ್ಟು ಅನುದಾನ ನೀಡಿ ಸಹಕರಿಸುತ್ತಿದ್ದಾರೆ. ಪ್ರಸಕ್ತ ಬೇಸಿಗೆಯಲ್ಲಿ ಸಮಸ್ಯಾತ್ಮಕ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆ ಕಾಮಗಾರಿಗಳಿಗೆ ಆದ್ಯತೆ ನಿಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೂ.20ಕೋಟಿಗೂ ಹೆಚ್ಚು ಮೊತ್ತದಲ್ಲಿ ಚೆಕ್‌ಡ್ಯಾಂ, ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಪರಿಶಿಷ್ಟ ಸಮುದಾಯಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಕೂಲಿಕಾರರಿಗೆ ಸ್ಥಳೀಯವಾಗಿ ಕೆಲಸ ಒದಗಿಸಲಾಗಿದೆ ಎಂದು ಅಧ್ಯಕ್ಷರು ಸ್ಪಷ್ಟಪಡಿಸಿದರು. ಕಾನಾಮಡಗು ದಾಸೋಹ ಮಠದ ಶರಣಾರ್ಯ ಸ್ವಾಮೀಜಿ,  ಜಿ.ಪಂ. ಸದಸ್ಯ ಕೆ.ಎಂ. ಶಶಿಧರ್, ಪತ್ರಕರ್ತ ದೊಣೆಹಳ್ಳಿ ಗುರುಮೂರ್ತಿ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ  ಬಸವರಾಜಪ್ಪ, ವೀರೇಶ್, ಹನುಮಂತರೆಡ್ಡಿ, ಸದಸ್ಯರಾದ ತಿಪ್ಪೇಸ್ವಾಮಿ, ರಂಗಪ್ಪ, ಪ್ರಕಾಶ್‌ರೆಡ್ಡಿ,  ಭೂಸೇನಾ ನಿಗಮದ ಉಮೇಶ್ ಪಾಟೀಲ್, ನಿಂಗಪ್ಪ, ಪರಮೇಶ್ವರಪ್ಪ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.