ಬಡ ವಿದ್ಯಾರ್ಥಿಗಳಿಗೆ ನೆರವಾಗಬೇಕು

7

ಬಡ ವಿದ್ಯಾರ್ಥಿಗಳಿಗೆ ನೆರವಾಗಬೇಕು

Published:
Updated:

ಪೀಣ್ಯ ದಾಸರಹಳ್ಳಿ: `ಬಡ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಶ್ರೀಮಂತರು ನೆರವಾಗಬೇಕು~ ಎಂದು ಶಾಸಕ ಎಸ್.ಮುನಿರಾಜು ಹಣವಂತರಿಗೆ ಕೆರೆ ನೀಡಿದರು.ದಾಸರಹಳ್ಳಿ ಶೆಟ್ಟಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಲಕ್ಷ್ಮಮ್ಮ ಬೆಟ್ಟೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ನೀಡಿದ ನೋಟ್ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಸಿ.ಬಿ.ಶಂಕರೇಗೌಡ,  ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜುನಾಥ್, ಸದಸ್ಯರಾದ ಕೆಂಪಹೊಂಬಾಳಯ್ಯ, ಎನ್.ರಾಮಕೃಷ್ಣಯ್ಯ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಲಲಿತಮ್ಮ, ಗೌರಮ್ಮ, ಮುಖ್ಯೋಪಾಧ್ಯಾಯ ಹುಚ್ಚಪ್ಪ ಇತರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry