ಗುರುವಾರ , ಮೇ 19, 2022
21 °C

ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ನಗರದ ಸರಸ್ವತಿ ವಿದ್ಯಾಲಯದಲ್ಲಿ ಶಿಕ್ಷಣ ಪಡೆಯುತ್ತಿರುವ ಇಬ್ಬರು ಮಕ್ಕಳನ್ನು ದತ್ತು ಪಡೆಯುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಎನ್. ದತ್ತಾ ಘೋಷಣೆ ಮಾಡಿದರು.ವಿದ್ಯಾಲಯದಲ್ಲಿ ಮಂಗಳವಾರ ನಡೆದ ನೋಟ್‌ಬುಕ್ ವಿತರಣೆ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, `ದೂರದ ಊರುಗಳಿಂದ ಬಂದಿರುವ ಬಡ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅಂತಹ ಮಕ್ಕಳ ಶಿಕ್ಷಣಕ್ಕೆ ನೆರವಾಗುವುದು ನಮ್ಮ ಕರ್ತವ್ಯ~ ಎಂದರು.ತಮ್ಮ ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ನೀಡಿದ ನಗರಸಭೆ ಸದಸ್ಯ ಗಿರೀಶ ರಾವ್ ಮಾತನಾಡಿ, `ಈ ಶಾಲೆಯನ್ನು ಮುಚ್ಚಬಾರದು ಎನ್ನುವ ಉದ್ದೇಶದಿಂದ ಶಾಲೆಯ ಶಿಕ್ಷಕರೇ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ತುಂಬುವುದಲ್ಲದೆ ಅವರ ಎಲ್ಲ ಖರ್ಚು-ವೆಚ್ಚಗಳನ್ನು ನೋಡಿಕೊಳ್ಳುತ್ತಿದ್ದಾರೆ. ಇದು ಶ್ಲಾಘನೀಯ~ ಎಂದರು.`ನನ್ನ ವಾರ್ಡ್ ವ್ಯಾಪ್ತಿಯಲ್ಲಿ ಈ ಶಾಲೆಯಿದ್ದು ಯಾವುದೇ ಕಾರಣಕ್ಕೂ ಈ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ. ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಬರುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ನೆರವು ನೀಡಲಾಗುವುದು~ ಎಂದು ಅವರು ಭರವಸೆ ನೀಡಿದರು.ವಕೀಲ ಸೂರಜ್ ನಾಯ್ಕ ಮಾತನಾಡಿ, `ವಿದ್ಯಾರ್ಥಿಗಳ ಕೊರತೆಯಿಂದಾಗಿ ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಯಾವುದೇ ಕಾರಣಕ್ಕೆ ಗಡಿಭಾಗದಲ್ಲಿರುವ ಕನ್ನಡ ಮುಚ್ಚಲು ಬಿಡಬಾರದು~ ಎಂದರು.

ದೂರದ ಊರುಗಳಿಂದ ಶಾಲೆಗೆ ಬರುವ ವಿದ್ಯಾರ್ಥಿಗಳ ಬಸ್‌ಪಾಸ್ ವೆಚ್ಚವನ್ನು ಭರಿಸಲು ತಾವು ಸಿದ್ಧರಿರುವುದಾಗಿ ಅವರು ಹೇಳಿದರು.ಕರವೇ ಸದಸ್ಯ ವಿನಾಯಕ ಹರಿಕಂತ್ರ, ಮುಖ್ಯ ಶಿಕ್ಷಕ ಎಂ.ಬಿ.ಪಾಟೀಲ, ಶಿಕ್ಷಕ ಮಹಾದೇವ ರಾಣೆ, ವಕೀಲ ಶಿವರಾಮ ಸಿದ್ದರಕರ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.