ಹುಬ್ಬಳ್ಳಿ: ಅತಿರೇಕವಾಗಿ ವರ್ತಿಸಿದರೆ ವಿರೋಧ ಪಕ್ಷಗಳ ಬಣ್ಣ ಬಯಲಿಗೆಳೆಯುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯಕ್ಕೆ 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹರಿದುಬರುತ್ತಿದೆ. ಇದನ್ನು ತಡೆಗಟ್ಟುವ ಹುನ್ನಾರದಿಂದ ವಿರೋಧ ಪಕ್ಷಗಳು ನನ್ನ ವಿರುದ್ಧ ಭೂಹಗರಣದ ಆರೋಪ ಮಾಡುತ್ತಿವೆ’ ಎಂದು ಟೀಕಿಸಿದರು.

‘ವಿರೋಧ ಪಕ್ಷಗಳ ಅನಗತ್ಯ ಆರೋಪಗಳಿಗೆ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಜನ ಉತ್ತರ ನೀಡಲಿದ್ದಾರೆ. ಅಭಿವೃದ್ಧಿ ಆಧಾರದ ಮೇಲೆ ಈ ಚುನಾವಣೆ ನಡೆಯಲಿದೆ’ ಎಂದೂ ಅವರು ಹೇಳಿದರು.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪಕ್ಷದ ನಾಯಕರು ಪ್ರವಾಸ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿಗೆ ಹಿಂದೆಂದಿಗಿಂತಲೂ ಅನುಕೂಲಕರ ವಾತಾವರಣ ಇದೆ. ನಿರೀಕ್ಷೆ ಮೀರಿ ಪಕ್ಷ ಯಶ ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸಂಪುಟ ವಿಸ್ತರಣೆ ಹಾಗೂ ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ ಕುರಿತಂತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಚುನಾವಣೆ ನಂತರ ತನಿಖೆ
ಗೋಕಾಕ (ಬೆಳಗಾವಿ ಜಿಲ್ಲೆ): ಜಿ.ಪಂ. ಹಾಗೂ ತಾ.ಪಂ. ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಅಧಿಕಾರಿಗಳ ಸಭೆ ಕರೆದು, ಅಭಿವೃದ್ಧಿ ನಿಧಿಯ ದುರ್ಬಳಕೆ ಕುರಿತು ಸಮಗ್ರ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗುರುವಾರ ತಾಲ್ಲೂಕಿನ ಕಲ್ಲೋಳಿಯಲ್ಲಿ ಜಿ.ಪಂ. ಹಾಗೂ ತಾ.ಪಂ. ಚುನಾವಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಬೆಳಗಾವಿ ಜಿಲ್ಲಾ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಅಭಿವೃದ್ಧಿ ಕಾಮಗಾರಿಯಲ್ಲಿ ಲೋಪವೆಸಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.