ಕೃಷ್ಣರಾಜಪೇಟೆ: ತಾಲ್ಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿಯಿಂದಾಗಿ ಹತ್ತು ಸಾವಿರಕ್ಕೂ ಹೆಚ್ಚು ಕೃಷಿ ಪಂಪ್ಸೆಟ್ಗಳು ನೀರಿಲ್ಲದೆ ಬತ್ತಿ ಹೋಗಿದ್ದು, ಇವುಗಳ ಆಶ್ರಯದಲ್ಲಿರುವ ಒಣಗಿ ಹೋಗುತ್ತಿರುವ ಬೆಳೆಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಜೆಡಿಎಸ್ ಮುಖಂಡ ಕೆ.ಸಿ.ನಾರಾಯಣಗೌಡ ಒತ್ತಾಯಿಸಿದ್ದಾರೆ.

ತಾಲ್ಲೂಕಿನ ಅಕ್ಕಿಹೆಬ್ಬಾಳು ಮತ್ತು ಕಸಬಾ ಹೋಬಳಿಯ ಬರದಿಂದ ತತ್ತರಿಸುತ್ತಿರುವ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಬರದ ತೀವ್ರತೆ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಲ್ಲೂಕಿನಲ್ಲಿ 25 ಸಾವಿರ ಕೃಷಿ ಪಂಪ್ಸೆಟ್ಗಳಿದ್ದು, ಇವುಗಳ ಪೈಕಿ 10 ಸಾವಿರಕ್ಕೂ ಹೆಚ್ಚು ಪಂಪ್ಸೆಟ್ಗಳಲ್ಲಿ ಅಂತರ್ಜಲ ಸಂಪೂರ್ಣವಾಗಿ ಕುಸಿದಿದೆ. ಇದರ ಪರಿಣಾಮವಾಗಿ ಸಾವಿರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆಯಲಾಗಿದ್ದ ವಿವಿಧ ಬೆಳೆಗಳು ಒಣಗಿ ಹೋಗುತ್ತಿವೆ. ಜತೆಗೆ ಕೆರೆಗಳೂ ಬತ್ತಿ ಹೋಗಿದ್ದು, ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾಗಿದೆ. ಈ ಭಾಗದ ರೈತರಿಗೆ ಅಪಾರ ನಷ್ಟವುಂಟಾಗಿದೆ.

ಕೂಡಲೇ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು, ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಜಾನುವಾರುಗಳಿಗೆ ಮೇವು ಪೂರೈಸಬೇಕು. ಅಂತರ್ಜಲ ವೃದ್ಧಿಗೆ ತಾಲ್ಲೂಕಿನ ಕೆರೆ ಕಟ್ಟೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಜೆಡಿಎಸ್ ಮುಖಂಡರಾದ ಅಕ್ಕಿಹೆಬ್ಬಾಳು ಶ್ರೀನಿವಾಸ್, ನಾಟನಹಳ್ಳಿ ಗಂಗಾಧರ್, ಅಣ್ಣಯ್ಯ, ಚೌಡಸಮುದ್ರ ಚಂದ್ರಶೇಖರ್, ದಿನೇಶ್, ಲಕ್ಷ್ಮಣ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.