ಬುಧವಾರ, ಜೂನ್ 16, 2021
25 °C

ಬದ್ಧತೆಯಿಂದ ಸಮಾಜಮುಖಿ ಕಾರ್ಯ ಸಾಧ್ಯ: ದೊಡ್ಡರಂಗೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಪ್ರತಿಯೊಬ್ಬ ವ್ಯಕ್ತಿಯ ಒಲವು ಮತ್ತು ನಿಲುವುಗಳಲ್ಲಿ ಬದ್ಧತೆಯಿದ್ದಾಗ ಮಾತ್ರ ಸಮಾಜಮುಖಿ ಕಾರ್ಯಗಳನ್ನು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸಾಹಿತಿ ಪ್ರೊ.ದೊಡ್ಡರಂಗೇಗೌಡ ಹೇಳಿದರು.ನಗರದ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ  ಕಾರ್ಯಕ್ರಮಗಳ ಸಮರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  ಮೌಲ್ಯಗಳು ಅಪಮೌಲ್ಯವಾಗಿರುವ ಇಂದಿನ ದಿನಗಳಲ್ಲಿ ಯುವಕರು ಜಾಗೃತರಾಗಬೇಕಾಗಿದೆ. ಪದವಿ ಪಡೆದ ಮಾತ್ರಕ್ಕೆ ಸಮಾಜದಲ್ಲಿ ಎಲ್ಲವೂ ದೊರೆಯುವುದಿಲ್ಲ ಎಂಬುದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕೆಂದರು. ಅಂತರರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಆಟಗಾರ ಎ.ವಿ.ಶ್ರೀನಿವಾಸಗೌಡ ಮಾತನಾಡಿ, ಸತತ ಪರಿಶ್ರಮ ಮತ್ತು ಸ್ಪಷ್ಟ ಗುರಿಯನ್ನು ಹೊಂದುವ ಮೂಲಕ ಸಾಧನೆ ಮಾಡಬೇಕು ಎಂದರು.ಕೊಂಗಾಡಿಯಪ್ಪ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಶಂಕರಯ್ಯ, ಉಪಾಧ್ಯಕ್ಷ ಬಿ.ಎನ್.ತಿಮ್ಮಣ್ಣ, ಗೌರವ ಕಾರ್ಯದರ್ಶಿ ಎಂ.ಅಶ್ವತ್ಥಯ್ಯ, ಎ.ಜಿ.ಶ್ರೀನಿವಾಸ ಮೂರ್ತಿ, ಖಜಾಂಚಿ, ಪ್ರಭುದೇವಯ್ಯ, ನಿರ್ದೇಶಕರಾದ ವಿ.ತಿಮ್ಮಶೆಟ್ಟಪ್ಪ, ಎ.ಆರ್.ರಾಜಶೇಖರ್, ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ವಿ.ಸುಬ್ರಮಣ್ಯ, ಉಪಪ್ರಾಂಶುಪಾಲ ಪ್ರೊ.ಬಿ.ಟಿ.ಮಹಾದೇವ್ ಮುಂತಾದವರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.