ಶುಕ್ರವಾರ, ಮೇ 20, 2022
19 °C

ಬನ್ನೇರುಘಟ್ಟಕ್ಕೆ ರಾಜ್ಯಪಾಲರ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್ ಶುಕ್ರವಾರ ಕುಟುಂಬ ಸಮೇತ ಭೇಟಿ ನೀಡಿ ಉದ್ಯಾನದ ವೀಕ್ಷಣೆ ಮಾಡಿದರು.ಬೆಳಗ್ಗೆ 10 ಗಂಟೆಗೆ ಉದ್ಯಾನಕ್ಕೆ ಆಗಮಿಸಿದ ರಾಜ್ಯಪಾಲರು ಮಧ್ಯಾಹ್ನ 2ರ ವರೆಗೆ ಉದ್ಯಾನದಲ್ಲಿ ವಿಹರಿಸಿದರು. ಸಸ್ಯಾಹಾರಿ ಪ್ರಾಣಿಗಳ ಸಫಾರಿ, ಟೈಗರ್ ಸಫಾರಿ, ಕರಡಿ ಸಫಾರಿ ಮತ್ತು ಮೃಗಾಲಯವನ್ನು ವೀಕ್ಷಿಸಿ ಉದ್ಯಾನದ ಕಾರ್ಯ ನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಆರ್. ರಾಜು ತಿಳಿಸಿದ್ದಾರೆ.ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್. ಎಸ್.ಸುರೇಶ್ ಈ ಸಂದರ್ಭದಲ್ಲಿ ಹಾಜರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.