ಬರಗಾಲ ನಡುವೆ ಅದ್ಧೂರಿ ದಸರಾ: ಟೀಕೆ

7

ಬರಗಾಲ ನಡುವೆ ಅದ್ಧೂರಿ ದಸರಾ: ಟೀಕೆ

Published:
Updated:

ಪಾಂಡವಪುರ: ಸಮರ್ಪಕವಾಗಿ ಮಳೆಯಾಗದೆ ಬರಗಾಲ ಎದುರಾಗುತ್ತಿದ್ದರೂ ಸರ್ಕಾರ ಅದ್ಧೂರಿ ದಸರಾ ಆಚರಿಸಿ ಹಣ ವ್ಯಯಿಸುತ್ತಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು, ಅಧ್ಯಕ್ಷ ಕೆ.ಎಸ್. ಪುಟ್ಟಣ್ಣಯ್ಯ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.ಪಟ್ಟಣದ ಐದು ದೀಪ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಜನ ಸಾಮಾನ್ಯರು ಸಂಕಷ್ಟದಲ್ಲಿರುವಾಗ ಸರ್ಕಾರ ಅದ್ಧೂರಿ ದಸರಾ ಅಚರಿಸುತ್ತಿರುವುದು ಜನವಿರೋಧಿ ನೀತಿ. ಜನರ ತೆರಿಗೆ ಹಣ ವ್ಯಯವಾಗುತ್ತಿದೆ. ದನಕರುಗಳಿಗೆ ಮೇವಿಲ್ಲ, ಸಮರ್ಪಕ ವಿದ್ಯುತ್ ಸರಬರಾಜಿಲ್ಲ. ಜನ ಸಾಮಾನ್ಯರಿಗೆ ಸೀಮೆ ಎಣ್ಣೆ ದೊರೆಯುತ್ತಿಲ್ಲ ಎಂದು ಟೀಕಿಸಿದರು.ನಂತರ ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ಕಡ್ಡಾಯವಾಗಿ ವಿದ್ಯುತ್ ಸರಬರಾಜು ಮಾಡಬೇಕೆಂದು ಒತ್ತಾಯಿಸಿದರು.ಅಲ್ಲಿಂದ ಮಿನಿ ವಿಧಾನಸೌಧಕ್ಕೆ ತೆರಳಿದ ಕಾರ್ಯಕರ್ತರು ಕೆಲ ಕಾಲ ಧರಣಿ ನಡೆಸಿದರು. ಚಿನಕುರಳಿ, ಮೇಲುಕೋಟೆ ಹೋಬಳಿಯ ಅನೇಕ ಹಳ್ಳಿಗಳಲ್ಲಿ ಸಮರ್ಪಕ ಮಳೆಯಾಗದೆ ರೈತರು ಕಂಗಾಲಾಗಿದ್ದಾರೆ. ಈ ಪ್ರದೇಶಗಳನ್ನು ಬರಪೀಡಿತವೆಂದು ಘೋಷಿಸಿ ಪರಿಹಾರ ನೀಡಬೇಕು ಎಂದರು.ತಾಲ್ಲೂಕು ರೈತ ಸಂಘದ ಅಧ್ಯಕ್ಷ ಹರವು ಪ್ರಕಾಶ್, ಕಾರ್ಯದರ್ಶಿ ಅಮೃತಿ ರಾಜಶೇಖರ್, ಸಂಘನಾ ಕಾರ್ಯದರ್ಶಿ ಬಿ.ಟಿ.ಮಂಜುನಾಥ್, ತಾ.ಪಂ. ಸದಸ್ಯ ಕೆ.ಗೌಡೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ದಯಾನಂದ್ ಇತರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry