ಶುಕ್ರವಾರ, ಮೇ 29, 2020
27 °C

ಬರಗಾಲ ಪೀಡಿತ ಪ್ರದೇಶ ಘೋಷಣೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬರಗಾಲ ಪೀಡಿತ ಪ್ರದೇಶ ಘೋಷಣೆಗೆ ಒತ್ತಾಯ

ಲಕ್ಷ್ಮೇಶ್ವರ: ಈ ಬಾರಿ ತಾಲ್ಲೂಕಿನಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದ್ದು ಕೂಡಲೇ ಶಿರಹಟ್ಟಿ ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ ರೈತರ ಹಿತ ಕಾಪಾಡಬೇಕು ಎಂದು ಪಕ್ಷಾತೀತ ರೈತಪರ ಹೋರಾಟ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ ಒತ್ತಾಯಿಸಿದ್ದಾರೆ.ಈಚೆಗೆ ರೈತ ಕೆಂಚನಗೌಡ ಪಾಟೀಲ ಅವರ ಹೊಲಕ್ಕೆ ಭೇಟಿ ನೀಡಿ ಒಣಗುತ್ತಿರುವ ಬಳ್ಳಿ ಶೇಂಗಾವನ್ನು ವೀಕ್ಷಣೆ ಮಾಡಿದ ಅವರು `ತಾಲ್ಲೂಕಿನಲ್ಲಿ ಬಹು ಸಂಖ್ಯೆ ರೈತರು ಮಳೆಯನ್ನೇ ನಂಬಿದ್ದಾರೆ. ಆದರೆ ಈ ವರ್ಷ ಮುಂಗಾರು ಮಳೆ ಸರಿಯಾಗಿ ಆಗಿಲ್ಲ. ಹೀಗಾಗಿ ಬೆಳೆಗಳೆಲ್ಲ ಒಣಗಿದ್ದು ರೈತರು ಆತಂಕದಲ್ಲಿದ್ದಾರೆ.

 

ಬೆಳೆ ಬಾರದೆ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲೆ ಸರ್ಕಾರ ತಾಲ್ಲೂಕನ್ನು ಬರಗಾಲ ಪೀಡಿತ ತಾಲ್ಲೂಕು ಪಟ್ಟಿಯಲ್ಲಿ ತಾಲ್ಲೂಕಿನ ಹೆಸರನ್ನು~ ಎಂದು ಪದ್ಮರಾಜ ಪಾಟೀಲ ಆಗ್ರಹಿಸಿದ್ದಾರೆ.ಇದೇ ಸಂದರ್ಭದಲ್ಲಿ ಶಂಕರಗೌಡ ಪಾಟೀಲ, ಮಂಜು ಮುಳಗುಂದ, ಬಸನಗೌಡ ಪಾಟೀಲ, ಶಾಮಣ್ಣ ಸವಣೂರು, ಟಾಕನಗೌಡ ಪಾಟೀಲ, ಶೇಖಣ್ಣ ಗೋಡಿ, ಬಸವರಾಜ ಬಡ್ನಿ, ಶಂಕರ ಬಾಳಿಕಾಯಿ, ಸೋಮು ಪಾಟೀಲ, ನಾಗರಾಜ ಮಲಗಣ್ಣವರ, ನಿಂಗಪ್ಪ ಮಜ್ಜಿಗುಡ್ಡ ಮತ್ತಿತರರು ಆಗ್ರಹಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.