ಶುಕ್ರವಾರ, ಏಪ್ರಿಲ್ 23, 2021
23 °C

ಬರಗೂರರಿಗೆ ಪಂಪ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಿರಿಯ ಸಾಹಿತಿ ಮತ್ತು ಚಲನಚಿತ್ರ ನಿರ್ದೇಶಕ ಪ್ರೊ.ಬರಗೂರು ರಾಮಚಂದ್ರಪ್ಪ ಅವರನ್ನು 2011ನೇ ಸಾಲಿನ ಪಂಪ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.  ಧಾರವಾಡ ಮೂಲದ ವಿ.ಬಿ.ಹಿರೇಗೌಡರ್ ಅವರನ್ನು ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಹಾಗೂ ಬೆಂಗಳೂರಿನ ನೃತ್ಯ ಗುರು ಲಲಿತಾ ಶ್ರೀನಿವಾಸನ್ ಅವರನ್ನು ಶಾಂತಲಾ ನಾಟ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ರಾಜ್ಯ ಸರ್ಕಾರದ ಈ ಮೂರೂ ಪ್ರಶಸ್ತಿಗಳು ತಲಾ ಮೂರು ಲಕ್ಷ ರೂಪಾಯಿ ನಗದು ಮತ್ತು ಸ್ಮರಣಿಕೆ ಒಳಗೊಂಡಿವೆ. ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ಸ್ಥಳ ಮತ್ತು ದಿನಾಂಕಗಳನ್ನು ಇನ್ನೂ ನಿರ್ಧರಿಸಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹಿರೇಗೌಡರ್: ಇವರು ಮೂಲತಃ ಧಾರವಾಡ ಜಿಲ್ಲೆಯ ಗುಡಿಗೇರಿಯವರು. ಹುಬ್ಬಳ್ಳಿಯಲ್ಲಿ ಲಲಿತ ಕಲಾ ಪದವಿ ಪಡೆದು, ನಂತರ ಸ್ನಾತಕೋತ್ತರ ಅಧ್ಯಯನ ಪೂರ್ಣಗೊಳಿಸಿದರು. 1967ರಲ್ಲಿ ದಾವಣಗೆರೆಯ ವಿಶ್ವವಿದ್ಯಾಲಯ ಲಲಿತಕಲಾ ಕಾಲೇಜಿನ ಉಪನ್ಯಾಸಕರಾಗಿ ಸೇವೆಗೆ ಸೇರಿದರು. ನಂತರ 27 ವರ್ಷಗಳ ಕಾಲ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2003ರಲ್ಲಿ ನಿವೃತ್ತಿ ಹೊಂದಿದರು.

ಲಲಿತಾ ಶ್ರೀನಿವಾಸನ್: ಬೆಂಗಳೂರಿನ ನೂಪುರ ನೃತ್ಯ ಶಾಲೆಯ ಮುಖ್ಯಸ್ಥರು. 1978ರಲ್ಲಿ ನೂಪುರ ನೃತ್ಯ ಶಾಲೆ ಆರಂಭಿಸಿದ ಇವರು, ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ, ಶಿಕ್ಷಕಿಯಾಗಿ, ನೃತ್ಯ ಸಂಯೋಜಕಿಯಾಗಿ ಚಿರಪರಿಚಿತರು. ರಾಷ್ಟ್ರೀಯ ಮಟ್ಟದಲ್ಲಿ ಶಿರೋಮಣಿ, ಪ್ರಿಯದರ್ಶಿನಿ ಮತ್ತಿತರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗಳನ್ನೂ ಪಡೆದಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.