ಭಾನುವಾರ, ಮೇ 16, 2021
24 °C

ಬರಪೀಡಿತ ಜಿಲ್ಲೆಗಳಿಗೆ ಸಿ.ಎಂ ಪ್ರವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬರಪೀಡಿತ ಜಿಲ್ಲೆಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಅಧ್ಯಯನಕ್ಕೆ ಸಚಿವರ ತಂಡ ರಚನೆ ಮಾಡಿದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರೂ ಶನಿವಾರದಿಂದ ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.ಶನಿವಾರ ಮೈಸೂರು, ಭಾನುವಾರ ಚಿತ್ರದುರ್ಗ ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಹಾರ ಕಾರ್ಯಗಳ ಅನುಷ್ಠಾನದ ಬಗ್ಗೆ ಪರಿಶೀಲಿಸಲಾಗುವುದು. ಬರಗಾಲಪೀಡಿತ ಜಿಲ್ಲೆಗಳಿಗೆ ಈಗಾಗಲೇ 360 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ವಿಧಾನ ಸಭಾ ಕ್ಷೇತ್ರಕ್ಕೂ 30 ಲಕ್ಷ ರೂಪಾಯಿ ನೀಡಲಾಗಿದೆ. ಹಣದ ಕೊರತೆ ಇಲ್ಲ ಎಂದು ಸದಾನಂದಗೌಡ ಅವರು ಗುರುವಾರ ಇಲ್ಲಿ ತಿಳಿಸಿದರು.ಸಚಿವರಾದ ಜಗದೀಶ ಶೆಟ್ಟರ್, ಎಸ್.ಸುರೇಶ್‌ಕುಮಾರ್, ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವರ ಮೂರು ತಂಡಗಳು ಇದೇ 9,10,11ರಂದು ಬರಪೀಡತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿವೆ. ಸಣ್ಣಪುಟ್ಟ ಸಮಸ್ಯೆಗಳು ಇದ್ದರೆ ಸ್ಥಳದಲ್ಲೇ ಪರಿಹರಿಸಲಿದ್ದಾರೆ. 1800 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ.ಬರ ಪರಿಸ್ಥಿತಿ ನಿರ್ವಹಣೆಗೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗಿದೆ. ಈ ಬಗ್ಗೆ ಯಾರೇ ಟೀಕೆ ಮಾಡಿದರೂ, ಅದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ~ ಎಂದು ತಿಳಿಸಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿರುವ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, `ಅವರಿಗೆ ಪ್ರವಾಸ ಮಾಡಿ ಕ್ಷೇತ್ರಗಳ ಬಗ್ಗೆ ಚೆನ್ನಾಗಿ ಗೊತ್ತಿದೆ. ಪ್ರವಾಸದ ನಂತರ ಅವರು ಕೇಳುವ ಎಲ್ಲ ಸವಲತ್ತುಗಳನ್ನು ನೀಡಲಾಗುವುದು~ ಎಂದು ಹೇಳಿದರು.`ದೆಹಲಿ ಪ್ರತಿನಿಧಿ ಕೆಲಸ ಮಾಡಲಿ~: ರಾಜ್ಯದಲ್ಲಿ ಬರಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ 2600 ಕೋಟಿ ರೂಪಾಯಿ ನೆರವು ನೀಡುವಂತೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.ದೆಹಲಿಯಲ್ಲಿರುವ ಕರ್ನಾಟಕದ ವಿಶೇಷ ಪ್ರತಿನಿಧಿ ವಿ. ಧನಂಜಯ ಕುಮಾರ್ ಅವರು ಕ್ರಿಯಾಶೀಲವಾಗಿ ಕೆಲಸ ಮಾಡುವ ಮೂಲಕ ರಾಜ್ಯಕ್ಕೆ ನೆರವು ಕೊಡಿಸಲು ಮುಂದಾಗಬೇಕು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.