ಶುಕ್ರವಾರ, ಮೇ 14, 2021
28 °C

ಬರಪೀಡಿತ ಪ್ರದೇಶಗಳಲ್ಲಿ ಸಿಎಂ ಯಾತ್ರೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು (ಪಿಟಿಐ): ಬರಪೀಡಿತ ಪ್ರದೇಶಗಳ ಪ್ರವಾಸವನ್ನು ಮೈಸೂರಿನಿಂದ ಶನಿವಾರ ಆರಂಭಿಸಿರುವ ಮುಖ್ಯಮಂತ್ರಿ ಸದಾನಂದಗೌಡ ಅವರು ಈ ತಿಂಗಳ ಕೊನೆಯ ಹೊತ್ತಿಗೆ ಕೇಂದ್ರಸರ್ಕಾರದ ಬಳಿಗೆ ಸರ್ವಪಕ್ಷ ನಿಯೋಗದೊಂದಿಗೆ ತೆರಳಿ 2200 ಕೋಟಿ ರೂ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುವುದಾಗಿ  ಪ್ರಕಟಿಸಿದರು.ವಿರೋಧಪಕ್ಷಗಳೊಂದಿಗೆ ಏಪ್ರಿಲ್ 12 ರಂದು ಚರ್ಚಿಸಿ ಅವರಿಂದ ಸಲಹೆಗಳನ್ನು ಪಡೆಯಲಾಗುವುದು ಎಂದು  ಅವರು ತಿಳಿಸಿದರು.ಬರಪೀಡಿತ ಪ್ರದೇಶಗಳಿಗೆ ತೆರಳಿ ನಡೆಯುತ್ತಿರುವ ಪರಿಹಾರ ಕಾರ್ಯಕ್ರಮಗಳನ್ನು ಅವಲೋಕಿಸಿ ವರದಿ ನೀಡಲೆಂದೇ ಮೂವರು ಸಚಿವರ ತಂಡವನ್ನು ರಚಿಸಲಾಗಿದೆ ಎಂದು ಗೌಡರು ತಿಳಿಸಿದರು.ಈ ತಿಂಗಳ ಕಡೆಯ ಹೊತ್ತಿಗೆ ಸ್ವತ: ತಾವೇ ಸಿಂಗಾಪುರ, ಜಪಾನ್ ಮತ್ತು ಥೈಲ್ಯಾಂಡ್ ದೇಶಗಳಿಗೆ ಪ್ರವಾಸ ಹೊರಟು ಜಾಗತಿಕ ಹೂಡಿಕೆದಾರರೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು ಪ್ರಕಟಿಸಿದರು.ತಮ್ಮ ವಿದೇಶ ಪ್ರವಾಸ ರಾಜ್ಯಕ್ಕೆ ವಿದೇಶಿ ಬಂಡವಾಳ ಹರಿದು ಬರುವಂತೆ ಮಾಡಲೆಂದೇ ಹೊರತು ವಿಹಾರಕ್ಕಾಗಿ ಅಲ್ಲ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸುವುದನ್ನು ಮರೆಯಲಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.