ಬರ ಅಧ್ಯಯನ ಅಗತ್ಯವಿಲ್ಲ: ಬಿಎಸ್‌ವೈ

7

ಬರ ಅಧ್ಯಯನ ಅಗತ್ಯವಿಲ್ಲ: ಬಿಎಸ್‌ವೈ

Published:
Updated:

ಬೆಂಗಳೂರು: ಕೇಂದ್ರ ಸರ್ಕಾರದ ಒಂದು ತಂಡ ರಾಜ್ಯದ ಬರ ಪರಿಸ್ಥಿತಿ ಕುರಿತು ಈಗಾಗಲೇ ಅಧ್ಯಯನ ನಡೆಸಿರುವ ಕಾರಣ ಮತ್ತೊಂದು ತಂಡದಿಂದ ಅಧ್ಯಯನ ನಡೆಸುವ ಅಗತ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ಇಲ್ಲಿನ ರೇಸ್‌ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ಬರ ನಿರ್ವಹಣೆಗೆ ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರದ ಸಚಿವರೂ ಇಲ್ಲಿನ ಪರಿಸ್ಥಿತಿ ಅರಿತು, ನೆರವು ಕೊಡಿಸುವಲ್ಲಿ ವಿಫಲರಾಗಿದ್ದಾರೆ~ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry