ಗುರುವಾರ , ಮೇ 6, 2021
23 °C

ಬರ: ಕಾಂಗ್ರೆಸ್ ವರದಿ ಶೀಘ್ರವೇ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: “ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಬರ ಅಧ್ಯಯನದ ವರದಿಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಇದೇ 23ರ ಒಳಗೆ ಸಲ್ಲಿಸಲಾಗುವುದು. ಬರ ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಇಲ್ಲಿ ಹೇಳಿದರು.ತಾಲ್ಲೂಕಿನ ನರೇಂದ್ರ, ಹೆಬ್ಬಳ್ಳಿ, ಅಮ್ಮಿನಭಾವಿ ಗ್ರಾಮಗಳಳಿಗೆ ಭೇಟಿ ನೀಡಿದ ಅವರು ಬರ ಪರಿಸ್ಥಿತಿ ಅಧ್ಯಯನ ನಡೆಸಿ, ರೈತರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.`ಕಾಂಗ್ರೆಸ್ ಪಕ್ಷದ ನಾಯಕರು ಮೂರು ತಂಡಗಳಲ್ಲಿ ರಾಜ್ಯದ 123 ತಾಲ್ಲೂಕುಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಎರಡ್ಮೂರು ದಿನಗಳಲ್ಲಿ ಪ್ರವಾಸ ಮುಗಿಯಲಿದೆ. ನಂತರ ಸಮಗ್ರ ವರದಿಯನ್ನು ರಾಜ್ಯ ಹಾಗೂ ಕೇಂದ್ರಕ್ಕೆ ಸಲ್ಲಿಸಲಾಗುವುದು. ಮುಖ್ಯಮಂತ್ರಿಗಳು ಕರೆದಿರುವ ಸರ್ವ ಪಕ್ಷಗಳ ಮುಖಂಡರ ಸಭೆ ಇದೇ 19 ರಂದು ನಡೆಯಲಿದ್ದು ತಾವು ಭಾಗವಹಿಸುತ್ತೇನೆ~ ಎಂದರು.ನೀರಿನ ಸಮಸ್ಯೆ ಗಂಭೀರವಿದ್ದು, ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಮೇವು ಇಲ್ಲದ ಕಾರಣ ರೈತರು ತಮ್ಮ ದನಕರುಗಳನ್ನು ಮಾರುವ ಸ್ಥಿತಿಗೆ ಬಂದಿದ್ದಾರೆ.ಈ ಭಾಗದಲ್ಲಿ ಗೋ ಶಾಲೆ ಹಾಗೂ ಮೇವು ಬ್ಯಾಂಕ್ ತೆರೆಯಬೇಕು. ಉಚಿತವಾಗಿ ಮೇವು ಒದಗಿಸಬೇಕು ಎಂದು ಒತ್ತಾಯಿಸಿದರು.ಬರ ಅಧ್ಯಯನ ತಂಡದ ಸದಸ್ಯರಾದ ಟಿ.ಬಿ. ಜಯಚಂದ್ರ, ಶಿವಮೂರ್ತಿ, ಶ್ರೀನಿವಾಸ ಮಾನೆ ಹಾಗೂ ಶಾಸಕ ವೀರಣ್ಣ ಮತ್ತಿಕಟ್ಟಿ, ಮಾಜಿ ಶಾಸಕ ವಿನಯ ಕುಲಕರ್ಣಿ, ಸಿ.ಎಸ್.ಶಿವಳ್ಳಿ ಮತ್ತಿತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.