ಮಂಗಳವಾರ, ಮೇ 11, 2021
26 °C

ಬರ: ಗಡಿಭಾಗದ ಪ್ರದೇಶಕ್ಕೆ ಶಾಸಕರ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ತಾಲ್ಲೂಕಿನ ಗಡಿಭಾಗವಾದ ಪುಣಜನೂರು ಪ್ರದೇಶದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಬರಗಾಲದ ಪರಿಣಾಮ ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ ಕೊರತೆಯಾಗಿದ್ದು, ಶಾಸಕ ಸಿ. ಪುಟ್ಟರಂಗಶೆಟ್ಟಿ   ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.ದೊಡ್ಡಮೂಡಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಕುಡಿಯುವ ನೀರು, ಮೇವು ಇಲ್ಲದೆ ಜಾನುವಾರು ನಿತ್ರಾಣಗೊಂಡಿರುವುದನ್ನು ಪರಿಶೀಲಿಸಿದರು.ನಂತರ ಮಾತನಾಡಿದ ಅವರು, ಗೋಶಾಲೆ ತೆರೆದು ಜಾನುವಾರುಗಳಿಗೆ ಸಮರ್ಪಕವಾಗಿ ಕುಡಿಯುವ ನೀರು, ಮೇವು ಪೂರೈಸಲು ಕ್ರಮಕೈಗೊಳ್ಳಲಾಗುವುದು. ಅಗತ್ಯವಿದ್ದರೆ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುವುದು ಎಂದು ಭರವಸೆ ನೀಡಿದರು.ಗ್ರಾಮ ಪಂಚಾಯಿತಿ ಸದಸ್ಯ ಮೂರ್ತಿ, ಮುಖಂಡರಾದ ಶಿವನಾಯಕ, ವೆಂಕಟೇಶ್, ಚಾಮರಾಜು ಮೊದಲಾದವರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.