ಚಿತ್ರದುರ್ಗ: ಜಿಲ್ಲೆಯ 17 ಹೋಬಳಿಗಳಲ್ಲಿ ಸಂಪೂರ್ಣ ಬರಪರಿಸ್ಥಿತಿ ಉಂಟಾಗಿದೆ ಮತ್ತು ಒಟ್ಟಾರೆ ರೂ 432 ಕೋಟಿ ಬೆಳೆ ನಷ್ಟವಾಗಿದೆಯಾದರೂ ಕೇಂದ್ರ ಸರ್ಕಾರ ರೂಪಿಸಿದ ನಿಯಮಾವಳಿಗಳಿಂದಾಗಿ ಚಿತ್ರದುರ್ಗವನ್ನು ಬರಪೀಡಿತ ಎಂದು ಘೋಷಿಸಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಆಸ್ನೋಟಿಕರ್ ತಿಳಿಸಿದರು.

ಬರಪರಿಸ್ಥಿತಿ ಕುರಿತು ಮಂಗಳವಾರ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ಒಳಗೊಂಡ ನಿಯೋಗವನ್ನು ಮುಖ್ಯಮಂತ್ರಿ ಬಳಿ ಕೊಂಡೊಯ್ದು ಹೆಚ್ಚಿನ ಪರಿಹಾರ ನೀಡುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ರಾಜ್ಯ ಸರ್ಕಾರಕ್ಕೆ ಬರ ಪರಿಹಾರ ಕೈಗೊಳ್ಳಲು ರೂ 45 ಕೋಟಿ ಬೇಡಿಕೆ ಸಲ್ಲಿಸಲಾಗಿತ್ತು. ಇದರಲ್ಲಿ ಈಗಾಗಲೇ ರೂ 1 ಕೋಟಿ ಬಿಡುಗಡೆ ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ರೂ 2 ಕೋಟಿ ಬಿಡುಗಡೆಯಾಗಲಿದೆ ಎಂದರು.

ಪ್ರಸ್ತುತ ಬೆಳೆಗಳು ಬೆಂಕಿ ತಗುಲಿದ ರೀತಿಯಲ್ಲಿದ್ದು ಒಣಗಿವೆ. ರೈತರು ಅಪಾರ ನಷ್ಟಕ್ಕೆ ಒಳಗಾಗಿದ್ದಾರೆ. ಬೆಳೆ ಹಾನಿಯಾಗಿರುವ ಬಗ್ಗೆ ಸಮಗ್ರ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆ ಸುತ್ತಮುತ್ತ ಮೇವು ದೊರೆಯುವುದು ಕಷ್ಟವಾಗುತ್ತಿದೆ. ಆದ್ದರಿಂದ, ಆಂಧ್ರಪ್ರದೇಶದಿಂದ ಮೇವು ತರಲಾಗುವುದು. 2004ರಲ್ಲಿ ರೂ 1,500ಗೆ ಒಂದು ಟನ್ ಮೇವು ದೊರೆಯುತ್ತಿತ್ತು. ಈಗ ರೂ 4000ಕ್ಕೆ ಏರಿದೆ ಎಂದು ತಿಳಿಸಿದರು.

ಈಗಾಗಲೇ ಏಳು ಮೇವು ಬ್ಯಾಂಕ್ಗಳನ್ನು ಆರಂಭಿಸಲಾಗಿದೆ. ಜತೆಗೆ, ಗೋಶಾಲೆಗಳನ್ನು ತೆರೆಯಲು ಕ್ರಮಕೈಗೊಳ್ಳಲಾಗಿದೆ. ಈ ಹಿಂದಿನ ವರ್ಷಗಳಲ್ಲಿ ಬರ ಪರಿಸ್ಥಿತಿ ಉಂಟಾದಾಗ ಆರಂಭಿಸಿದ್ದ ಗೋಶಾಲೆಗಳನ್ನು ದುರಸ್ತಿ ಮಾಡಿ ಪುನಾರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತಹಶೀಲ್ದಾರ್ ನೇತೃತ್ವದ ಕಾರ್ಯಪಡೆ ರಚಿಸಲಾಗಿದೆ. ಈಗಾಗಲೇ ರೂ 10 ಲಕ್ಷ ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಮಾತನಾಡಿ, ಕೇಂದ್ರ ಸರ್ಕಾರ ಪ್ರತಿ ತಾಲ್ಲೂಕನ್ನು ಘಟಕ ಎಂದು ಪರಿಗಣಿಸುತ್ತದೆ. ಒಟ್ಟಾರೆ ಶೇ. 50ಕ್ಕಿಂತ ಕಡಿಮೆ ಮಳೆಯಾಗಿರಬೇಕು. ಜಿಲ್ಲೆಯಲ್ಲಿ ಬಿತ್ತನೆ ಜಾಸ್ತಿಯಾಗಿ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.