ಭಾನುವಾರ, ಮೇ 16, 2021
22 °C

ಬರ ನಿಧಿಗೆ ಜೆಡಿಎಸ್ ಸಂಸದ, ಶಾಸಕರ ವೇತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಸಂಸದರು, ಶಾಸಕರು ತಮ್ಮ ಒಂದು ತಿಂಗಳ ವೇತನವನ್ನು ಬರ ಪರಿಹಾರ ಕಾರ್ಯಗಳಿಗೆ ನೀಡಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದರು.ಒಂದು ತಿಂಗಳ ವೇತನದ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಬೇಕೇ ಅಥವಾ ಪಕ್ಷದ ವತಿಯಿಂದ ನೇರವಾಗಿ ಗಂಜಿ ಕೇಂದ್ರಗಳನ್ನು ತೆರೆಯಬೇಕೇ ಎಂಬ ಬಗ್ಗೆ ಆದಷ್ಟು ಬೇಗ ನಿರ್ಧರಿಸಲಾಗುವುದು ಎಂದು ತಿಳಿಸಿದರು.ರಾಜ್ಯದಲ್ಲಿನ ಬರಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಹೆಚ್ಚಿನ ನೆರವು ನೀಡುವಂತೆ ಕೋರಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ನೇತೃತ್ವದ ನಿಯೋಗ ಸದ್ಯದಲ್ಲೇ ಪ್ರಧಾನಮಂತ್ರಿ ಡಾ.ಮನಮೋಹನ ಸಿಂಗ್ ಅವರಿಗೆ ಮನವಿ ಸಲ್ಲಿಸಲಿದೆ. ಸಿಎಂ ಡಿ.ವಿ.ಸದಾನಂದಗೌಡ ಕರೆದೊಯ್ಯುವ ಸರ್ವ ಪಕ್ಷಗಳ ನಿಯೋಗದಲ್ಲೂ ಜೆಡಿಎಸ್ ಪಾಲ್ಗೊಳ್ಳಲಿದೆ.ಇದಲ್ಲದೆ ಮಾಜಿ ಪ್ರಧಾನಿ ದೇವೇಗೌಡ ನೇತೃತ್ವದ ನಿಯೋಗ ಪ್ರತ್ಯೇಕವಾಗಿ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಲಿದೆ ಎಂದು ಕುಮಾರಸ್ವಾಮಿ ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷದ ಮುಖಂಡರು, ಮಾಜಿ ಸಚಿವರು, ಶಾಸಕರು, ಪದಾಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಬರ ಪರಿಸ್ಥಿತಿಯನ್ನು ಪ್ರಧಾನಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು. ಪಕ್ಷದ ಮುಖಂಡರಾದ ಎಂ.ಸಿ.ನಾಣಯ್ಯ, ಬಸವರಾಜ ಹೊರಟ್ಟಿ, ಸಿ.ನಾರಾಯಣಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.