ಚಾಮರಾಜನಗರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ನೇತೃತ್ವದ ತಂಡ ಏ. 19ರಂದು ಭೇಟಿ ನೀಡಲಿದೆ.

`ಗಡಿ ಜಿಲ್ಲೆಯಲ್ಲಿ ಬರದಿಂದ ಗ್ರಾಮೀಣರು ತತ್ತರಿಸಿದ್ದಾರೆ. ರಾಜ್ಯ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಸಚಿವರು ಹಾಗೂ ಅಧಿಕಾರಿಗಳು ಶಾಸಕರ ಸಲಹೆ, ಸೂಚನೆ ಕೂಡ ಪಾಲಿಸುತ್ತಿಲ್ಲ.

ಇದರಿಂದ ಕುಡಿಯುವ ನೀರು ಹಾಗೂ ಮೇವು ಪೂರೈಕೆಯಲ್ಲಿ ತೀವ್ರ ತೊಂದರೆಯಾಗಿದೆ~ ಎಂದು ಶಾಸಕ ಎಚ್.ಎಸ್. ಮಹದೇವಪ್ರಸಾದ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಪರಮೇಶ್ವರ್ ನೇತೃತ್ವದ ತಂಡದಲ್ಲಿ ಮಾಜಿ ಸಚಿವ ಮುನಿಯಪ್ಪ, ಸುದರ್ಶನ್ ಹಾಗೂ ಎ.ಮಂಜು ಇದ್ದಾರೆ. ಅಂದು ಬೆಳಿಗ್ಗೆ ಗುಂಡ್ಲುಪೇಟೆ ಪ್ರದೇಶಗಳಲ್ಲಿ ಭೇಟಿ ನೀಡಲಿದ್ದಾರೆ. ಬಳಿಕ ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ ಹಾಗೂ ಹನೂರು ಭಾಗಕ್ಕೆ ಭೇಟಿ ನೀಡುವರು. ನಾಗರಿಕರ ಅಹವಾಲು ಆಲಿಸಲಿದ್ದಾರೆ.

ಏ. 28ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ತುಮಕೂರಿಗೆ ಭೇಟಿ ನೀಡಲಿದ್ದಾರೆ. ಅವರಿಗೆ ಅಧ್ಯಯನ ವರದಿ ಸಲ್ಲಿಸಿ ರಾಜ್ಯಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಕೋರಲಾಗುವುದು ಎಂದರು. ಬರದ ತೀವ್ರತೆ ಅರ್ಥಮಾಡಿಕೊಳ್ಳುವಲ್ಲಿ ಸರ್ಕಾರ ಸೋತಿದೆ. ಬರಪೀಡಿತ ಪ್ರದೇಶ ಘೋಷಿಸಿದ ಆರು ತಿಂಗಳ ನಂತರ ಸಚಿವರು ಅಧ್ಯಯನಕ್ಕೆ ಮುಂದಾಗಿರುವುದು ಶೋಚನೀಯ. ಮುಖ್ಯಮಂತ್ರಿ ಸೇರಿದಂತೆ ಸಚಿವರ ನಿರ್ಲಕ್ಷ್ಯದ ಪರಿಣಾಮ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.

ಸಮರೋಪಾದಿಯಲ್ಲಿ ಬರ ನಿರ್ವಹಣೆ ಕೆಲಸ ನಡೆದಿಲ್ಲ. ಬರಪರಿಹಾರ ಕಾಮಗಾರಿ ಕೈಗೊಂಡು ಜನರಿಗೆ ಉದ್ಯೋಗ ನೀಡಲು ಮುಂದಾಗಿಲ್ಲ. ಜತೆಗೆ, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಎಕರೆವಾರು ಪರಿಹಾರ ನೀಡಲು ಕ್ರಮಕೈಗೊಂಡಿಲ್ಲ ಎಂದರು.

ಜಿಲ್ಲೆಯಲ್ಲಿ ಜಿಲ್ಲಾಡಳಿತ ಬರ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವೈಫಲ್ಯ ಕಂಡಿದೆ. ಕುಡಿಯುವ ನೀರು ಹಾಗೂ ಮೇವು ಪೂರೈಸುವಲ್ಲಿ ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ. ಇದೇ ನಿರ್ಲಕ್ಷ್ಯ ಮುಂದುವರಿದರೆ ಜಿಲ್ಲೆಯ ಎಲ್ಲ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಜಿಲ್ಲೆಗೆ 7.50 ಕೋಟಿ ರೂ ಬರಪರಿಹಾರದ ಅನುದಾನ ಲಭಿಸಿದೆ. ಇದರಲ್ಲಿ ಬಹಳಷ್ಟು ಹಣ ಕುಡಿಯುವ ನೀರು ಪೂರೈಕೆಗೆ ಮೀಸಲಾಗಿದೆ. ಹೀಗಾಗಿ, ಕಾಮಗಾರಿಗಳು ಪೂರ್ಣಗೊಳ್ಳುವುದು ವಿಳಂಬವಾಗುತ್ತಿದೆ.

ಬಿಡುಗಡೆಯಾಗಿರುವ ಅನುದಾನ ಖರ್ಚಾದರೆ ಮಾತ್ರವೇ ಹೆಚ್ಚುವರಿ ಅನುದಾನ ಲಭಿಸಲಿದೆ. ಆದರೆ, ಜಿಲ್ಲಾಧಿಕಾರಿ ಅವರು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಕ್ರಮಕೈಗೊಂಡಿಲ್ಲ ಎಂದು ದೂರಿದರು.

ಅರಿಶಿಣಕ್ಕೆ ನಿಗದಿಪಡಿಸಿರುವ ಪ್ರೋತ್ಸಾಹಧನ ಕಡಿಮೆಯಿದೆ. ಜತೆಗೆ, ಇಂದಿಗೂ ಖರೀದಿ ಕೇಂದ್ರ ಆರಂಭಿಸಿಲ್ಲ. ಇದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಿದೆ. ಬೆಲೆ ಕುಸಿತದಿಂದ ಕೆಂಗೆಟ್ಟಿರುವ ರೈತರಿಗೆ ಸ್ಥೈರ್ಯ ತುಂಬವ ಕೆಲಸಕ್ಕೆ ಸರ್ಕಾರ ಮುಂದಾಗಿಲ್ಲ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ, ಬಿ.ಪಿ.ಪುಟ್ಟಬುದ್ಧಿ, ಸದಾಶಿವಮೂರ್ತಿ, ಎಂ.ರಾಮಚಂದ್ರ, ಬಿ.ಕೆ. ರವಿಕುಮಾರ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.