ಗುರುವಾರ , ಮೇ 6, 2021
26 °C

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೇಂದ್ರ ಸರ್ಕಾರವು ರಾಜ್ಯದ ಬರಗಾಲ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಸಾಕಷ್ಟು ನೆರವನ್ನು ಒದಗಿಸಿದ್ದರೂ, ಅದನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಹೇಳಿದರು.ನಗರದ ಗಾಂಧಿ ಮೈದಾನದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಶನಿವಾರ ಹಮ್ಮಿಕೊಂಡ `ಕಾಂಗ್ರೆಸ್‌ಗೆ ಬನ್ನಿ; ಬದಲಾವಣೆ ತನ್ನಿ~ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.ಕಳೆದ ಆರು ತಿಂಗಳ ಹಿಂದೆ ಕೇಂದ್ರ ಸರ್ಕಾರ ಬರ ಪರಿಹಾರ ನಿಧಿಯಿಂದ ರೂ. 126 ಕೋಟಿ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ ಸಲುವಾಗಿ ರೂ. 127 ಕೋಟಿ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಇದನ್ನು ಸಮರ್ಥವಾಗಿ ಬಳಸಿಕೊಂಡಿಲ್ಲ ಎಂದು ಆರೋಪಿಸಿದರು.ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಅವರನ್ನು ಪಕ್ಷದ ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಮಡಿಕೇರಿ ಎಪಿಎಂಸಿ ಮಾಜಿ ಅಧ್ಯಕ್ಷೆ ಜಯಂತಿ ಆರ್.ಶೆಟ್ಟಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಕಾರ್ಯಕ್ರಮದಲ್ಲಿ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಹಾಗೂ ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಮಾತನಾಡಿದರು.ವೇದಿಕೆಯಲ್ಲಿ ಬ್ಲಾಸಂ ಫರ್ನಾಂಡೀಸ್, ಪಕ್ಷದ ಮುಖಂಡರಾದ ಎಂ.ಎಂ. ನಾಣಯ್ಯ, ಸುಮಾವಸಂತ್, ಟಿ. ಜಾನ್, ಅರುಣ್ ಮಾಚಯ್ಯ, ಟಿ.ಪಿ. ರಮೇಶ್, ಕೆ.ಪಿ. ಚಂದ್ರಕಲಾ, ವೀಣಾ ಅಚ್ಚಯ್ಯ, ಎಂ.ಜಿ. ಕುಟ್ಟಪ್ಪ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ. ಪ್ರದೀಪ್ ಸ್ವಾಗತಿಸಿ, ಮಡಿಕೇರಿ ತಾಲ್ಲೂಕು ಪಂಚಾಯಿತಿ ಸದಸ್ಯ ನೆರವಂಡ ಉಮೇಶ್ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.