ಭಾನುವಾರ, ಅಕ್ಟೋಬರ್ 20, 2019
21 °C

ಬರ ಪರಿಸ್ಥಿತಿ: ಸರ್ವಪಕ್ಷ ನಿಯೋಗಕ್ಕೆ ಆಗ್ರಹ

Published:
Updated:

ಬೆಂಗಳೂರು: ರಾಜ್ಯದ 99 ತಾಲ್ಲೂಕುಗಳಲ್ಲಿನ ಬರ ಪರಿಸ್ಥಿತಿಯ ತೀವ್ರತೆ ಕುರಿತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಬೇಕು ಎಂದು ಕಾಂಗ್ರೆಸ್ ಮುಖಂಡ, ನಟ ಎಂ.ಎಚ್. ಅಂಬರೀಷ್ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರನ್ನು ಒತ್ತಾಯಿಸಿದ್ದಾರೆ.ರಾಜ್ಯ ಸರ್ಕಾರ ಬರಪೀಡಿತ ತಾಲ್ಲೂಕುಗಳಲ್ಲಿ ಇದುವರೆಗೆ ಯಾವುದೇ ಪರಿಹಾರ ಕಾರ್ಯಗಳನ್ನು ಆರಂಭಿಸಿಲ್ಲ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ. ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದುಬಿದ್ದಿದೆ. ಬಿಜೆಪಿ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಕಾರಣ, ವಿಧಾನಸಭೆಯನ್ನು ವಿಸರ್ಜಿಸಿ ಹೊಸ ಜನಾದೇಶ ಪಡೆಯಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

Post Comments (+)