ಬರ ಪರಿಸ್ಥಿತಿ: ಸಿದ್ದರಾಮಯ್ಯ ಪರಿಶೀಲನೆ

6

ಬರ ಪರಿಸ್ಥಿತಿ: ಸಿದ್ದರಾಮಯ್ಯ ಪರಿಶೀಲನೆ

Published:
Updated:

ಬಳ್ಳಾರಿ: ಜಿಲ್ಲೆಯಾದ್ಯಂತ ತಲೆದೋರಿರುವ ಬರ ಪರಿಸ್ಥಿತಿಯ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ವಿಧಾನಸಭೆಯ ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ  ಬುಧವಾರ ನಗರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥ ನಾಯ್ಕ ನೇತೃತ್ವದಲ್ಲಿ ಆಗಮಿಸಿದ್ದ ಅಧಿಕಾರಿಗಳಿಂದ ಅವರು ವಿವರ ಪಡೆದರು.ಹೆಚ್ಚುವರಿ ಕ್ರಿಯಾ ಯೋಜನೆ ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸುವುದಲ್ಲದೆ, ಮಳೆಯ ಕೊರತೆಯಿಂದ ಕೆಲಸ ಇಲ್ಲದಂತಾಗಿರುವ ಕೃಷಿ ಕೂಲಿಕಾರರಿಗೆ ಪರ್ಯಾಯ ಉದ್ಯೋಗ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಮೇವು ಬ್ಯಾಂಕ್ ಸ್ಥಾಪನೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು.ಕಾಂಗ್ರೆಸ್‌ನ ನಗರದ ಘಟಕದ ಅಧ್ಯಕ್ಷ ಜೆ.ಎಸ್. ಆಂಜಿನೇಯುಲು, ಮಹಿಳಾ ಘಟಕದ ಅಧ್ಯಕ್ಷೆ ಕಮಲಾ ಮರಿಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry