ಬೆಂಗಳೂರು: `ಬಹುತೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಸರ್ಕಾರ ಶೀಘ್ರದಲ್ಲೇ ಬರ ಪರಿಹಾರ ಕಾರ್ಯಗಳನ್ನು ಕೈ ಗೊಳ್ಳಬೇಕು~ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ವಿಧಾನಸೌಧ ಆವರಣದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ ಅವರು, `ಬೇಸಿಗೆ ದಿನಗಳ ನೀರಿನ ಬವಣೆಯನ್ನು ನಿರ್ವಹಿಸಲು ರಾಜ್ಯ ಸರ್ಕಾರ ಅಸಮರ್ಥವಾಗಿದೆ. ಜನ ಹಾಗೂ ಜಾನುವಾರುಗಳಿಗೆ ನೀರು, ಆಹಾರವನ್ನು ಒದಗಿಸುವ ಕೆಲಸಕ್ಕೆ ಈ ವರೆಗೂ ಮುಂದಾಗದ ಮಂತ್ರಿಗಳು ಕೇವಲ ಪಕ್ಷದ ಆಂತರಿಕ ರಾಜಕಾರಣದಲ್ಲಿ ಮುಳುಗಿ ಹೋಗಿದೆ. ಸರ್ಕಾರ ಕೂಡಲೇ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು~ ಎಂದು ಆಗ್ರಹಿಸಿದರು.

`ಕೇಂದ್ರದ ಮೇಲೆ ಒತ್ತಡ ತಂದು ರಾಜ್ಯ ನೀರಾವರಿ ವಿವಾದಗಳನ್ನು ಶೀಘ್ರವಾಗಿ ಬಗೆಹರಿಸಲು ಪ್ರಯತ್ನಿಸಬೇಕು. ಬರ ಪರಿಸ್ಥಿತಿ ನಿರ್ವಹಣೆಗಾಗಿ ಸರ್ಕಾರ ವಿಶೇಷ ಯೋಜನೆಯನ್ನು ರೂಪಿಸಬೇಕು~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.