ಶುಕ್ರವಾರ, ಮೇ 7, 2021
22 °C

ಬರ ಪರಿಹಾರ ನಿಧಿಗೆ ಕೆಎಂಎಫ್‌ನಿಂದ ರೂ 5 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ರಾಜ್ಯದ ಬಹುತೇಕ ಕಡೆಗಳಲ್ಲಿ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯ ಪರಿಹಾರ ನಿಧಿಗೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ರೂ ಐದು ಕೋಟಿ ನೆರವು ನೀಡಲಿದೆ ಎಂದು ಮಹಾಮಂಡಳಿಯ ಅಧ್ಯಕ್ಷ, ಶಾಸಕ ಜಿ.ಸೋಮಶೇಖರ ರೆಡ್ಡಿ ತಿಳಿಸಿದರು.ನಗರದ ಕೆಎಂಎಫ್ ಕಚೇರಿ ಆವರಣದಲ್ಲಿ ಭಾನುವಾರ ನಂದಿನಿ ಐಸ್‌ಕ್ರೀಮ್ ಉತ್ಪಾದನಾ ಘಟಕದ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಈ ವಿಷಯ ತಿಳಿಸಿದರು. ಜಾನುವಾರುಗಳಿಗೆ ನೆರವಾಗಲು ರೂ 50 ಲಕ್ಷ ಮೌಲ್ಯದ ಪಶು ಆಹಾರ, ಮೇವು ವಿತರಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ತೀವ್ರ ಬರಗಾಲದಿಂದಾಗಿ ರೈತರು, ಕೃಷಿ ಕೂಲಿಕಾರರು ಸಂಕಷ್ಟ ಎದುರಿಸುವಂತಾಗಿದೆ. ಜಾನುವಾರುಗಳು ಮೇವು, ಕುಡಿಯುವ ನೀರಿಲ್ಲದೆ ಪರದಾಡುತ್ತಿವೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ, ಲಾಭದಲ್ಲಿರುವ ಒಕ್ಕೂಟದಿಂದ ನೆರವು ನೀಡಲು ತೀರ್ಮಾನಿಸಲಾಗಿದೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.