ಬುಧವಾರ, ಆಗಸ್ಟ್ 4, 2021
20 °C

ಬರ ಪರಿಹಾರ ನೀಡಲು ಕ್ರಮ: ಡಿ.ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಜಿಲ್ಲೆಯ 9 ಹೋಬಳಿಗಳಲ್ಲಿ ನಿರೀಕ್ಷಿಸಿದ ಪ್ರಮಾಣದಲ್ಲಿ ಮಳೆಯಾಗದೆ ಇರುವ ಕಾರಣ ಆ ಹೋಬಳಿಗಳನ್ನು ಬರ ಪೀಡಿತ ಎಂದು ಗುರುತಿಸಿ, ಆ ಪ್ರದೇಶಗಳಿಗೆ ಬರ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.`ಜಿಲ್ಲೆಯ ಅರಸೀಕೆರೆ ತಾಲ್ಲೂಕು, ಅರಕಲಗೂಡು ತಾಲ್ಲೂಕಿನ ಕಸಬಾ ಹೋಬಳಿ, ದೊಡ್ಡಮಗ್ಗೆ, ಕೊಣನೂರು ಹಾಗೂ ಬೇಲೂರು ತಾಲ್ಲೂಕಿನ ಹಳೇಬೀಡು ಹೋಬಳಿಗಳಲ್ಲಿ ಇತರೆ ಪ್ರದೇಶಕ್ಕಿಂತ ಕಡಿಮೆ ಮಳೆಯಾಗಿದ್ದು, ಈ ಹೋಬಳಿ ಕೇಂದ್ರಗಳಲ್ಲಿ ಅವಶ್ಯಕವಾಗಿ ಬೇಕಾಗುವ ಬರ ಪರಿಹಾರವನ್ನು ಅತೀ ಶೀಘ್ರವೇ ಕಲ್ಪಿಸಲಾಗುವುದು ಹಾಗೂ ಈ ಪ್ರದೇಶಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ 6 ಕೋಟಿ ರೂಪಾಯಿ ಹೆಚ್ಚುವರಿ ಹಣ ನೀಡುವಂತೆ ಕೋರಲಾಗಿದೆ' ಎಂದರು.ಶಿಕ್ಷಣ ಹಕ್ಕು ಕಾಯ್ದೆ ಯೋಜನೆಯಲ್ಲಿ ಕೆಲವು ಲೋಪದೋಷಗಳು ಕಂಡುಬಂದಿದ್ದು, ಈ ಸಂಬಂಧ ಯೋಜನೆಯಡಿ ನಡೆದಿರುವ ಅಕ್ರಮಗಳ ಕುರಿತು ಕೂಡಲೇ ಪರಿಶೀಲನೆ ನಡೆಸಿ ಅರ್ಹರಲ್ಲದ ವ್ಯಕ್ತಿಗಳನ್ನು ತೆಗೆದುಹಾಕಲಾಗುವುದು. ನಗರದ ಕೆಲವು ಪ್ರತಿಷ್ಠಿತ ಖಾಸಗಿ ಶಾಲೆಗಳು ಆರ್.ಟಿ.ಇ. ಯೋಜನೆಯನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದ್ದು, ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು. ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಹಲವು ಪ್ರಯತ್ನಗಳು ನಡೆದಿದ್ದು, ಈಗಾಗಲೇ ಅಕ್ರಮವಾಗಿ ಮರಳು ಸಾಗಾಣಿಕೆ ಹಾಗೂ ತೆಗೆಯುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ. ಈಗಾಗಲೇ 400 ಲಾರಿಗಳಿಗೆ ಜಿ.ಪಿ.ಆರ್.ಎಸ್. ಅಳವಡಿಸಲಾಗಿದ್ದು, ಟ್ರ್ಯಾಕ್ಟರ್ ಮಾಲೀಕರಿಗೆ ನದಿ ಪಾತ್ರಗಳಿಗೆ ಹೋಗದಂತೆ ಸೂಚಿಸಿ ಅವರುಗಳಿಗೂ ಮರಳು ಸಾಗಾಣಿಕೆ ನಡೆಸಲು ಪರವಾನಗಿ ನೀಡಿ ಟ್ರ್ಯಾಕ್ಟರ್‌ಗಳಿಗೂ ಜಿ.ಪಿ.ಆರ್.ಎಸ್. ಅಳವಡಿಕೆ ಮಾಡಲಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.