ಶುಕ್ರವಾರ, ಮೇ 14, 2021
31 °C

ಬರ ಪರಿಹಾರ- ಸಚಿವರಿಂದ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗೃಹ ಸಚಿವ ಆರ್. ಅಶೋಕ ನೇತೃತ್ವದ ಸಚಿವರ ತಂಡ ಇದೇ 9ರಂದು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಬರ ಪರಿಹಾರ ಕಾರ್ಯಕ್ರಮಗಳ ಅನುಷ್ಠಾನದ ಪರಿಶೀಲನೆ ನಡೆಸಲಿದೆ.ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಸಚಿವರ ಮೂರು ತಂಡಗಳನ್ನು ರಚಿಸಿದ್ದು, ಅದರಲ್ಲಿ ಅಶೋಕ ನೇತೃತ್ವದ ತಂಡ ಈ 2 ಜಿಲ್ಲೆಗಳಿಗೆ ಭೇಟಿ ನೀಡಲಿದೆ. ತಂಡದಲ್ಲಿ ಸಚಿವರಾದ ಸುರೇಶಕುಮಾರ್, ಬಿ.ಎನ್.ಬಚ್ಚೇಗೌಡ ಮತ್ತು ಎಸ್.ಎ.ರವೀಂದ್ರನಾಥ್ ಇದ್ದಾರೆ.

 

ಸಚಿವರು ಸೋಮವಾರ ಬೆಳಿಗ್ಗೆ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಅದರ ನಂತರ ಮೈಸೂರು ಜಿಲ್ಲೆಗೆ ತೆರಳಲಿದ್ದು, ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.