ಭಾನುವಾರ, ಮೇ 16, 2021
22 °C

ಬರ: ರಜಾ ಅವಧಿಯಲ್ಲಿ ಬಿಸಿಯೂಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ:  `ಬರ ಪರಿಸ್ಥಿತಿ ಎದುರಿಸುತ್ತಿರುವ ರಾಜ್ಯದ 24 ಜಿಲ್ಲೆಗಳ 123 ತಾಲ್ಲೂಕುಗಳಲ್ಲಿ 1ರಿಂದ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರಜಾ ಅವಧಿಯಲ್ಲಿ ಬಿಸಿಯೂಟ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ  ಶನಿವಾರ ಇಲ್ಲಿ ತಿಳಿಸಿದರು.



ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದಕ್ಕೆ ಅಂದಾಜು ರೂ. 110 ಕೋಟಿ ಹಣ ಮೀಸಲಿಡಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಇದನ್ನು ಭರಿಸಲಿವೆ ಎಂದರು.



ಈ ಯೋಜನೆಯನ್ನು 9ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿಲ್ಲ.

ಸ್ಥಳೀಯ ಪರಿಸ್ಥಿತಿಗೆ ತಕ್ಕಂತೆ ನಿರ್ಧಾರಗಳನ್ನು ಕೈಗೊಳ್ಳಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ  ನೀಡಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.