ಬೆಂಗಳೂರು: ಬರ ಪರಹಾರ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರ ಈವರೆಗೆ ರೂ 186.60 ಕೋಟಿ ಮಂಜೂರು ಮಾಡಿದೆ. ಈ ಪೈಕಿ ರೂ 70.23 ಕೋಟಿ ಬಿಡುಗಡೆ ಮಾಡಿದೆ. ಕೇಂದ್ರದ ಎನ್ಸಿಸಿಎಫ್ನ ಪಾಲಿನಲ್ಲಿ ಬಂದ ರೂ 126.76 ಕೋಟಿ ಮತ್ತು ರಾಜ್ಯದ ಪಾಲಿನ ರೂ 42.25 ಕೋಟಿ ಸೇರಿ ಒಟ್ಟು ರೂ 182.25 ಕೋಟಿಯನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸದಾನಂದ ಗೌಡ ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗಾಗಿ ರೂ 172.46 ಕೋಟಿ ಒದಗಿಸಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ 178.85 ಕೋಟಿ ಲಭ್ಯವಿದೆ. ಪರಿಹಾರ ಕಾಮಗಾರಿಗಳಿಗೆ ಹಣದ ಕೊರತೆ ಆಗಿಲ್ಲ ಎಂದು ಸರ್ವಪಕ್ಷಗಳ ಮುಖಂಡರ ಸಭೆಯಲ್ಲಿ ಅವರು ವಿವರ ನೀಡಿದರು.

ಬರ ಪರಿಹಾರಕ್ಕೆ ಹೆಚ್ಚಿನ ನೆರವು ಒದಗಿಸುವುದು, ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ, ಕಾವೇರಿ ಜಲ ವಿವಾದಲ್ಲಿ ರಾಜ್ಯದ ಹಿತಾಸಕ್ತಿ ಕಾಯುವುದು, ರೇಷ್ಮೆ ಆಮದು ಶುಲ್ಕ ಹೆಚ್ಚಳ, ತೊಗರಿ, ದಾಳಿಂಬೆ, ಅಡಿಕೆ, ಆಲೂಗೆಡ್ಡೆ, ಶುಂಠಿ ಬೆಳೆಗಾರರ ನೆರವಿಗೆ ಬರುವುದು ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಕೇಂದ್ರದ ಮೇಲೆ ಒತ್ತಡ ತರಲು ಸರ್ವಪಕ್ಷ ನಿಯೋಗದಲ್ಲಿ ಬರಬೇಕು ಎಂದು ಮುಖ್ಯಮಂತ್ರಿಯವರು ವಿವಿಧ ಪಕ್ಷಗಳ ಮುಖಂಡರಿಗೆ ಮನವಿ ಮಾಡಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ಪಿ.ನಾಡಗೌಡ, ಸಿಪಿಐ ರಾಜ್ಯ ಕಾರ್ಯದರ್ಶಿ ಪಿ.ವಿ.ಲೋಕೇಶ್, ಸಿಪಿಐ ಮುಖಂಡ ಡಾ.ಸಿದ್ದನಗೌಡ ಪಾಟೀಲ, ಸಿಪಿಎಂ ರಾಜ್ಯ ಕಾರ್ಯದರ್ಶಿ ಜಿ.ವಿ.ಶ್ರೀರಾಮ ರೆಡ್ಡಿ, ಮುಖಂಡ ಜಿ.ಎನ್.ನಾಗರಾಜ್, ಪ್ರಜಾ ಪ್ರಗತಿ ರಂಗದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಭಾರತೀಯ ರಿಪಬ್ಲಿಕನ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಂ.ಎಂ.ವೆಂಕಟಸ್ವಾಮಿ ಪಾಲ್ಗೊಂಡಿದ್ದರು.

ಸಚಿವರಾದ ಜಗದೀಶ ಶೆಟ್ಟರ್, ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ, ಎಸ್.ಸುರೇಶ್ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.