ಗುರುವಾರ , ಮೇ 6, 2021
23 °C

ಬರ: ವಾಟಾಳ್ ಪಕ್ಷದಿಂದ ಖಾಲಿ ಬಿಂದಿಗೆ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ರಾಜ್ಯದಲ್ಲಿ ಸಮರ್ಪಕವಾಗಿ ಬರ ನಿರ್ವಹಣೆಗೆ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರದಲ್ಲಿ ಮಂಗಳವಾರ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ಖಾಲಿ ಬಿಂದಿಗೆ ಪ್ರದರ್ಶಿಸಿ ಪ್ರತಿಭಟನೆ ನಡೆಯಿತು.ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದ ಎತ್ತಿನಗಾಡಿ ಏರಿದ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಖಾಲಿ ಬಿಂದಿಗೆ ಪ್ರದರ್ಶಿ ಸುವ ಮೂಲಕ ಪ್ರತಿಭಟನಾ ಮೆರವ ಣಿಗೆಗೆ ಚಾಲನೆ ನೀಡಿದರು. ಜೋಡಿರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಪ್ರತಿಭಟನಾಕಾರರು, ಕೂಡಲೇ ಬರಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.ಬರಗಾಲ ತಲೆದೋರಿರುವ ಹಿನ್ನೆಲೆ ಯಲ್ಲಿ ಗ್ರಾಮೀಣರು ಕೆಂಗೆಟ್ಟಿದ್ದಾರೆ. ಕುಡಿಯುವ ನೀರು ಪೂರೈಕೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಜಾನುವಾರುಗಳಿಗೆ ಮೇವು ಇಲ್ಲದಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ತ್ವರಿತವಾಗಿ ಬರಪರಿಹಾರ ಕಾಮಗಾರಿ ಕೈಗೆತ್ತಿಕೊಂಡು ಉದ್ಯೋಗ ಸೃಷ್ಟಿಸಬೇಕು ಎಂದು ಆಗ್ರಹಿಸಿದರು.ಗಡಿ ಜಿಲ್ಲೆಯನ್ನು ಕಾಯಂ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಮೂಲ ಸೌಲಭ್ಯ ಕಲ್ಪಿಸಲು 1 ಸಾವಿರ ಕೋಟಿ ರೂ ನೀಡಬೇಕು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಬರ ಕಾಮಗಾರಿ ಕೈಗೊಳ್ಳಲು 5 ಕೋಟಿ ರೂ ನೀಡಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ 3 ಸಾವಿರ ಕೋಟಿ ರೂ ಬರ ಪರಿಹಾರ ಘೋಷಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.ಜಾನುವಾರುಗಳಿಗೆ ಮೇವಿನ ಕೊರತೆ ಯಾಗದಂತೆ ಮುಂಜಾ ಗ್ರತೆವಹಿಸಬೇಕು. ಬರ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಶೀಘ್ರವೇ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ಕಾರ್‌ನಾಗೇಶ್, ರವಿಕುಮಾರ್, ಸುರೇಶ್‌ನಾಗ್, ನಂಜುಂಡಸ್ವಾಮಿ, ಲಿಂಗಣ್ಣ ಇತರರು ಪ್ರತಿಭಟನೆಯಲ್ಲಿ ಹಾಜರಿದ್ದರು.ಸಮನ್ವಯ ಮಕ್ಕಳ ಶಿಬಿರ ಇಂದು

ತಾಲ್ಲೂಕಿನ ಹೊಂಡರಬಾಳು ಗ್ರಾಮದ ಹಸಿರು ಮನೆಯಲ್ಲಿ ಏ. 11ರಂದು ಬೆಳಿಗ್ಗೆ 10.30ಗಂಟೆಗೆ ಸಮನ್ವಯ ಮಕ್ಕಳ ಶಿಬಿರ ಹಮ್ಮಿಕೊಳ್ಳಲಾಗಿದೆ.ಮೊಬಿಲಿಟಿ ಇಂಡಿಯಾ ಸಂಸ್ಥೆ ಹಾಗೂ `ಹಸಿರು ಮನೆ~ ಸಹಯೋಗದಡಿ ಶಿಬಿರ ನಡೆಯಲಿದೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜು ಉದ್ಘಾ ಟನೆ ನೆರವೇರಿಸುವರು. ಜ್ಯೋತಿ ಗೌಡನಪುರ ಗ್ರಾ.ಪಂ. ಅಧ್ಯಕ್ಷೆ ಮಾಲಾ ಅಧ್ಯಕ್ಷತೆವಹಿಸುವರು. ಪ್ರಗತಿಪರ ರೈತ ಎ. ಶಿವಣ್ಣ, ವಲಯ ಅರಣ್ಯಾಧಿಕಾರಿ ಎ.ಎ. ಖಾನ್ ಆಗಮಿಸಲಿದ್ದಾರೆ., ಕೆ. ಮನು, ಮೊಬಿಲಿಟಿ ಇಂಡಿಯಾದ ಕಾರ್ಯಕ್ರಮ ವ್ಯವಸ್ಥಾಪಕ ಎಸ್.ಎನ್. ಆನಂದ್, ರಂಗ ನಿರ್ದೇಶಕ ಕೆ. ಅಜಿತ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.