ಭಾನುವಾರ, ಮೇ 16, 2021
22 °C

ಬರ ಸಮಸ್ಯೆ ನೀಗಿಸಲು ಸರ್ಕಾರ ವಿಫಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಬರದ ಸಮಸ್ಯೆ ನೀಗಿಸಲು ವಿಫಲವಾಗಿರುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವನ್ನು ವಜಾ ಮಾಡಲು ಕೇಂದ್ರ ಸರ್ಕಾರಕ್ಕೆ ರಾಜ್ಯಪಾಲರು ಶಿಫಾರಸು ಮಾಡಬೇಕು ಎಂದು ಮಾಜಿ ಶಾಸಕ ಬಿ.ಆರ್.ನೀಲಕಂಠಪ್ಪ ಒತ್ತಾಯಿಸಿದ್ದಾರೆ.ಶನಿವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, ಈ ಹಿಂದೆ ಅತಿವೃಷ್ಟಿಯಿಂದ ಹಾನಿಯಾದ ರೈತ ಮತ್ತು ಬಡ ಕುಟುಂಬದವರಿಗೆ ವಸತಿ ನೀಡಲು ಸರ್ಕಾರ ವಿಫಲವಾಗಿದೆ. ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡುತ್ತಿರುವ ಬಿಜೆಪಿ ಸರ್ಕಾರ, ಜನವಸತಿ ಸಮಸ್ಯೆ ಪರಿಹರಿಸಲು ಕಿಂಚಿತ್ತೂ ಒತ್ತುಕೊಟ್ಟಿಲ್ಲ. ಬರದಿಂದ ಜನರು ಆಹಾರದ ಕೊರತೆ, ಜಾನುವಾರು ಮೇವು, ನೀರಿಲ್ಲದೇ ಪರದಾಡುವಂತಾಗಿದೆ. ಕುಡಿಯುವ ನೀರು ಪೂರೈಸಲು ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.ತರೀಕೆರೆ ಪುರಸಭೆ ಅಧ್ಯಕ್ಷೆ ಪಾರ್ವತಮ್ಮ ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ, ಮಾಡಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ರೂ.25 ಲಕ್ಷ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ದುಗ್ಲಾಪುರದ ಬಲದಂಡೆ ನಾಲೆಯಿಂದ ನೀರು ಪೂರೈಸಲಾಗುತ್ತಿದ್ದು, ಕೆಲವು ಸಂದರ್ಭದಲ್ಲಿ ಇದರ ಸಮೀಪದ ಮಾಸಿಕೆರೆಯಿಂದ ನೀರು ಶುದ್ಧೀಕರಿಸಿ ಪೂರೈಸಲಾಗುತ್ತಿದೆ. ಮಾಸಿಕೆರೆ ಸುತ್ತ ಯಾವುದೇ ಬೇಲಿ ಭದ್ರತೆ ಇಲ್ಲ.

 

ಸುತ್ತಮುತ್ತಲ ಗ್ರಾಮೀಣ ಭಾಗದ ಜನರು ನೀರು ಮಲಿನ ಮಾಡುತ್ತಿದ್ದು, ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ತರೀಕೆರೆ ಪಟ್ಟಣದ ಕಮನಹಟ್ಟಿಯಲ್ಲಿರುವ ಟ್ಯಾಂಕ್ ಶಿಥಿಲವಾಗಿದೆ. ತುರ್ತು ದುರಸ್ತಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ಪುರಸಭೆ ಮಾಜಿ ಅಧ್ಯಕ್ಷೆ ಹೇಮಲತಾ, ಟಿ.ಕೆ.ರಮೇಶ್ ಮತ್ತಿತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.