ಬರ: ಸಾವಿರ ಕೋಟಿಗೆ ಆಗ್ರಹ

7

ಬರ: ಸಾವಿರ ಕೋಟಿಗೆ ಆಗ್ರಹ

Published:
Updated:

ಬೆಂಗಳೂರು: ರಾಜ್ಯದಲ್ಲಿನ ಬರಗಾಲದ ಪರಿಸ್ಥಿತಿ ಮತ್ತು ಕುಡಿಯುವ ನೀರಿನ ಸಮಸ್ಯೆ ಎದುರಿಸಲು ತಕ್ಷಣ ಒಂದು ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಬೇಕು. ಪರಿಸ್ಥಿತಿ ನಿರ್ವಹಣೆಗೆ ಸಚಿವರು, ವಿರೋಧ ಪಕ್ಷಗಳ ಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.`ರಾಜ್ಯದಲ್ಲಿ ಉಲ್ಬಣಗೊಂಡಿರುವ ಕುಡಿಯುವ ನೀರಿನ ಸಮಸ್ಯೆ ಮತ್ತು ಬರ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರೇ ಪರಿಶೀಲನೆ ನಡೆಸಬೇಕು. ನವದೆಹಲಿಗೆ ತೆರಳಿ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಅಗತ್ಯ ನೆರವು ಕೋರಬೇಕು~ ಎಂದು ಅವರು ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.ಗ್ರಾಮಾಂತರ ಪ್ರದೇಶಗಳಿಗೆ ಅಗತ್ಯ ವಿದ್ಯುತ್ ಪೂರೈಕೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಬರ ಪರಿಹಾರ ಕಾಮಗಾರಿಗಳಿಗೆ ಸರ್ಕಾರ ಇದುವರೆಗೆ ಬಿಡುಗಡೆ ಮಾಡಿರುವ ಹಣ ಕೇವಲ 101 ಕೋಟಿ ರೂಪಾಯಿ. ರಾಜಕೀಯ ಕಾರಣಗಳಿಂದ ಸರ್ಕಾರವೇ ದುರ್ಬಲವಾಗಿದೆ. ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರ ಪರಿಣಾಮವನ್ನು ಜನ ಎದುರಿಸುವಂತಾಗಿದೆ ಎಂದು ಅವರು  ದೂರಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry