ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ರಾಜ್ಯ ಸರ್ಕಾರ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ನಗರದ ಕೆ.ಜಿ.ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಸಿಪಿಎಂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

`ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಬಿಡುಗಡೆ ಮಾಡರುವ 300 ಕೋಟಿ ರೂಪಾಯಿ ಹಣದಿಂದ ಬರ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಿಲ್ಲ. ಬರ ಪೀಡಿತ ತಾಲ್ಲೂಕುಗಳಿಗೆ ಅಗತ್ಯವಿರುವ ಪರಿಹಾರ ಕಾಮಗಾರಿಗಳಿಗಾಗಿ ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕು~ ಎಂದು ಪಕ್ಷದ ಬೆಂಗಳೂರು ಉತ್ತರ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಪ್ರಕಾಶ್ ಒತ್ತಾಯಿಸಿದರು.

`ಬರ ಪರಿಸ್ಥಿತಿ ತಲೆದೋರಿರುವ ತಾಲ್ಲೂಕುಗಳಲ್ಲಿ ಕುಡಿಯುವ ನೀರಿಗೂ ಜನ ತೀವ್ರ ತೊಂದರೆ ಪಡುವಂತಾಗಿದೆ. ರಾಜ್ಯ ಸರ್ಕಾರ ಕೂಡಲೇ ಪ್ರತಿ ತಾಲ್ಲೂಕುಗಳಿಗೂ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರ ಕೂಡಲೇ ಖಾಸಗಿ ನೀರಿನ ಟ್ಯಾಂಕರ್ಗಳಿಗೆ ಕಡಿವಾಣ ಹಾಕಬೇಕು~ ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಸಮಿತಿಯ ಕಾರ್ಯದರ್ಶಿ ಪ್ರಸನ್ನ ಕುಮಾರ್, ಉಮೇಶ್ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.