ಭಾನುವಾರ, ಮೇ 16, 2021
28 °C

ಬರ: 432 ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಗಂಭೀರವಾಗಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಸುವ ಗ್ರಾಮಗಳ ಸಂಖ್ಯೆ 432ಕ್ಕೆ ಏರಿದೆ.ಕಳೆದ ವಾರ 296 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿತ್ತು. ಆದರೆ ಒಂದೇ ವಾರದಲ್ಲಿ 432ಕ್ಕೆ ಏರಿದ್ದು, ಎಲ್ಲ ಕಡೆ ನೀರು ಮತ್ತು ಮೇವಿಗಾಗಿ ಬೇಡಿಕೆ ಬರುತ್ತಿದೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.ಬುಧವಾರದ ಮಾಹಿತಿ ಪ್ರಕಾರ 3,29,415 ಜನರಿಗೆ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಲಾಗಿದೆ. 47 ಗೋಶಾಲೆಗಳನ್ನು ತೆರೆಯಲಾಗಿದ್ದು, 38 ಮೇವಿನ ಬ್ಯಾಂಕ್‌ಗಳನ್ನು ಸ್ಥಾಪಿಸಲಾಗಿದೆ. ಬರ ಪರಿಹಾರ ಕಾರ್ಯಗಳಿಗೆ ಇದುವರೆಗೆ 369.69 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದ್ದು, ಜಿಲ್ಲಾಧಿಕಾರಿಗಳ ಬಳಿ ಇನ್ನೂ 178.85 ಕೋಟಿ  ಅನುದಾನ ಲಭ್ಯವಿದೆ.ಕೆಲ ಜಿಲ್ಲೆಗಳಿಂದ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಒಂದೆರಡು ದಿನಗಳಲ್ಲಿ 15 ಕೋಟಿ ರೂ.ಹಣ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. 12 ಸಚಿವರನ್ನು ಒಳಗೊಂಡ ಮೂರು ತಂಡಗಳು ಪ್ರತ್ಯೇಕವಾಗಿ ಕಳೆದ ಮೂರು ದಿನಗಳಿಂದ ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದವು. ಪ್ರವಾಸ ಸಂದರ್ಭದಲ್ಲಿ ಜನರಿಂದ ಬಂದ ಬೇಡಿಕೆಗಳು, ಜಿಲ್ಲೆಗಳಲ್ಲಿನ ವಾಸ್ತವ ಸ್ಥಿತಿ ಕುರಿತು ಸಚಿವರು ಗುರುವಾರ ಮುಖ್ಯಮಂತ್ರಿಗಳ ಗಮನಕ್ಕೆ ತರಲಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.