ಮಂಗಳವಾರ, ಆಗಸ್ಟ್ 4, 2020
24 °C

ಬಲಪಡಿಸಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಿವಾಸಪುರ: ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಜನರ ಮುಂದಿಟ್ಟು ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಲಕ್ಷ್ಮಯ್ಯ ಮನವಿ ಮಾಡಿದರು.ತಾಲ್ಲೂಕಿನ ಅರಿಕೆರೆ ಗ್ರಾಮದ ನಾಗನಾಥೇಶ್ವರಸ್ವಾಮಿ ದೇವಾಲಯದಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮೂರು ವರ್ಷ ಪೂರ್ಣಗೊಳಿಸಿದ್ದಕ್ಕಾಗಿ ಸೋಮವಾರ ಏರ್ಪಡಿಸಲಾಗಿದ್ದ ಸಂಭ್ರಮಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಾಡಿನ ಸರ್ವತೋಮುಖ ಪ್ರಗತಿ ಬಿಜಿಪಿಯ ಗುರಿ. ಕಳೆದ ಮೂರು ವರ್ಷಗಳ ಆಡಳಿತದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಬಿಜೆಪಿ ಸಾಧನೆಯ ಹಾದಿಯಲ್ಲಿ ಮುನ್ನಡೆದಿದೆ ಎಂದು ಹೇಳಿದರು.ಬಿಜೆಪಿ ಕಾರ್ಯಕರ್ತರು ಗ್ರಾಮೀಣ ಪ್ರದೇಶದಲ್ಲಿ ಜನರ ನಡುವೆ ಕೆಲಸ ಮಾಡಬೇಕು. ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅವುಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜಿಲ್ಲೆಯ ಎಲ್ಲ ತಾಲ್ಲುಕುಗಳಲ್ಲೂ ಬಿಜೆಪಿ ಸಂಘಟನೆ ಬಲಗೊಳ್ಳುವಂತೆ ಮಾಡಬೇಕು. ಜನ ಬಿಜೆಪಿಗೆ ಮಾಡಿರುವ ಆಶೀರ್ವಾದ ಮಾಡಿದ್ದಾರೆ. ಅವರ ನಿರೀಕ್ಷೆಯಂತೆ ಕೆಲಸ ಮಾಡುವುದು ಸರ್ಕಾರದ ಸಂಕಲ್ಪ ಎಂದು ನುಡಿದರು.ಜೆಡಿಎಸ್‌ನಿಂದ ಬಿಜೆಪಿಗೆ ಹೊಸದಾಗಿ ಸೇರ್ಪಡೆಯಾಗಿರುವ ಮಾಜಿ ಜಿಪಂ ಸದಸ್ಯ ಜಿ.ರಾಜಣ್ಣ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಯಶಂಕರ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೊಟ್ರಗುಳಿ ನಾರಾಯಣಸ್ವಾಮಿ, ಪುರಸಭಾ ಸದಸ್ಯರಾದ ಯಶೋದಮ್ಮ, ಜಿ.ಎಸ್.ಚಂದ್ರಶೇಖರ್, ಮುಖಂಡರಾದ ಜಯರಾಮರೆಡ್ಡಿ, ಇ.ಶಿವಣ್ಣ, ಪಲ್ಲಾರೆಡ್ಡಿ, ಚಂದ್ರಶೇಖರ್, ನಾರಾಯಣಸ್ವಾಮಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.