ಮಂಗಳವಾರ, ಅಕ್ಟೋಬರ್ 22, 2019
22 °C

ಬಲ್ಲಮಾವಟಿ: ಮರಳು ತೆಗೆಯುವ ತೊಟ್ಟಿ ವಶ

Published:
Updated:

ನಾಪೋಕ್ಲು: ಬಲ್ಲಮಾವಟಿ ಗ್ರಾಮದ ಕಾವೇರಿ ಹೊಳೆ ಬದಿಯಲ್ಲಿ ಅಕ್ರಮ ಮರಳುಗಾರಿಕೆಯ ಸುಳಿವು ದೊರೆತ ಹಿನ್ನೆಲೆಯಲ್ಲಿ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇಲಾಖೆಯ ಅಧಿಕಾರಿಗಳಾದ ಧನಲಕ್ಷ್ಮಿ, ಚೈತ್ರಾ, ನಾಪೋಕ್ಲು ಠಾಣಾಧಿಕಾರಿ ಪುನೀತ್‌ಕುಮಾರ್ ಹಾಗೂ ಕಂದಾಯ ಪರಿವೀಕ್ಷಕ ವಿಠಲ್  ಬಲ್ಲಮಾವಟಿ ಗ್ರಾಮದ ಮೂರು ಭಾಗಗಳಲ್ಲಿ ದಾಳಿ ನಡೆಸಿ ಮರಳು ತೆಗೆಯುವ ಏಳು ತೊಟ್ಟಿ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮೊಕದ್ದಮೆ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಮರಳುಗಾರಿಕೆ; ಸ್ಥಳ ಪರಿಶೀಲನೆ: ದೋಣಿ ಕಡುವಿನ ಕಾವೇರಿ ಹೊಳೆಯಲ್ಲಿ ಜೆಸಿಬಿಯಿಂದ ಅಕ್ರಮ ಮರಳುಗಾರಿಕೆಗೆ ತೋಡಲಾಗಿರುವ ಬೃಹತ್ ಗುಂಡಿಯನ್ನು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಮತ್ತು ಕಿರಿಯ ಎಂಜಿನಿಯರ್ ಮಧು ಈಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಂತರ ಮಾತನಾಡಿದ ಅವರು, ಡಿಸೆಂಬರ್ 3ರಿಂದ 2012ರ ಮಾರ್ಚ್ ಅಂತ್ಯದವರೆಗೆ ಕೆಲವು ನಿಬಂಧನೆಗಳನ್ನು ವಿಧಿಸಿ ಬಿ.ಎಂ. ಅಬ್ದುಲ್ ನಾಜಿರ್ ಎಂಬವರಿಗೆ ಮರಳುಗಾರಿಕೆಗೆ ಪರವಾನಗಿ ನೀಡಲಾಗಿದೆ. ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿರುವುದರಿಂದ ಸಾಧಕ ಬಾಧಕಗಳನ್ನು ಪರಿಶೀಲಿಸಿ ಮುಂದಿನ ಕ್ರಮಕ್ಕಾಗಿ ವರದಿಯನ್ನು ಉನ್ನತಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಎಂದರು.ನಾಪೋಕ್ಲು ಗ್ರಾ.ಪಂ ಅಧ್ಯಕ್ಷ ಸಲೀಂ ಹ್ಯಾರಿಸ್, ಸದಸ್ಯ ಮಹಮದ್ ಹನೀಫ್ ಮತ್ತಿತರರು ಅಕ್ರಮ ಮರಳುಗಾರಿಕೆಗೆ ಆಕ್ಷೇಪ ವ್ಯಕ್ತಪಡಿಸಿದರಲ್ಲದೆ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)