ಬುಧವಾರ, ಡಿಸೆಂಬರ್ 11, 2019
26 °C

ಬಳ್ಳಾರಿ: ಆರ್‌ಎಸ್‌ಎಸ್‌ ಸಭೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಆರ್‌ಎಸ್‌ಎಸ್‌ ಸಭೆ ಆರಂಭ

ಬಳ್ಳಾರಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ದ ಕಾರ್ಯಕರ್ತರ ರಾಜ್ಯ ಮಟ್ಟದ ಸಭೆ (ಬೈಠಕ್‌)ಯು ನಗರದ ಕೊಟ್ಟೂರು ಸ್ವಾಮಿ ಮಠದ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಆರಂಭವಾಯಿತು.4 ದಿನಗಳ ಕಾಲ ನಡೆಯುವ ಈ ಸಭೆಯಲ್ಲಿ ರಾಜ್ಯದ 150ಕ್ಕೂ ಅಧಿಕ ಪ್ರಮುಖರು ಹಾಗೂ ಸಂಘಟನೆಯ ರಾಷ್ಟ್ರೀಯ ಸರಸಂಘ ಚಾಲಕ ಮೋಹನ್‌ ಭಾಗವತ್ ಪಾಲ್ಗೊಂಡಿದ್ದಾರೆ.ಸಂಘ ಪರಿವಾರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಬಿಜೆಪಿಯ ರಾಜ್ಯ ಮತ್ತು ರಾಷ್ಟ್ರೀಯ ಘಟಕಗಳ ಪ್ರಮುಖ ಮುಖಂಡರು ಶನಿವಾರ ನಡೆಯುವ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್‌, ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್‌, ಡಿ.ವಿ. ಸದಾನಂದಗೌಡ, ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್‌. ಈಶ್ವರಪ್ಪ, ಆರ್‌.ಅಶೋಕ್‌, ಮಾಜಿ ಸಚಿವರಾದ ಸಿ.ಟಿ. ರವಿ, ಅರವಿಂದ ಲಿಂಬಾವಳಿ, ಸಂಘಟನೆಯ ಪ್ರಮುಖರಾದ ಸಂತೋಷ, ಸತೀಶ ಮತ್ತಿತರರು ಶುಕ್ರವಾರ ರಾತ್ರಿ ಹಾಗೂ ಶನಿವಾರ  ಬೆಳಿಗ್ಗೆ ನಗರಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಪ್ರತಿಕ್ರಿಯಿಸದ ಭಾಗವತ್: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯನ್ನಾಗಿ ಗುಜರಾತ್‌ನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಆಯ್ಕೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಭಾಗವತ್‌, ‘ದೆಹಲಿಯಲ್ಲಿ ಆ ಬೆಳವಣಿಗೆಗಳು ನಡೆಯುತ್ತಿವೆ. ಈ ಕುರಿತು ನಿರ್ಧಾರ ಕೈಗೊಳ್ಳುವವರು ದೆಹಲಿಯಲ್ಲಿದ್ದಾರೆ’ ಎಂದಷ್ಟೇ ಮಾಧ್ಯಮದವರಿಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)