ಶುಕ್ರವಾರ, ಮೇ 7, 2021
22 °C

ಬಸವಣ್ಣನವರ ಕೊಡುಗೆ ಅಪಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಮಹಿಳೆಯರ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಬಸವಣ್ಣನವರ ಕೊಡುಗೆ ಅಪಾರ~ ಎಂದು ಮಾಜಿ ಸಚಿವೆ ರಾಣಿ ಸತೀಶ್ ಅಭಿಪ್ರಾಯಪಟ್ಟರು.

ಸೋಮವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಸ್ನೇಹಾ ಟ್ರಸ್ಟ್ ಮತ್ತು ಬಸವ ಸಂಘಟನೆಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಬಸವಣ್ಣನವರು ಮಹಿಳೆಯರ ಸ್ಥಾನಮಾನ ವೃದ್ಧಿಗೆ 12 ನೇ ಶತಮಾನದಲ್ಲಿಯೆ ಶ್ರಮಿಸಿದರು. ಆದರೆ ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ಮಹಿಳೆಯರ ಸಾಮಾಜಿಕ ಸ್ಥಾನ ಕಡಿಮೆಯಾಗುತ್ತಿದೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರನ್ನು ಸಮಾನವಾಗಿ ನಿಲ್ಲಲು ಬಿಡುತ್ತಿಲ್ಲ ಎಂದರು.

`ಸಂವಿಧಾನದಲ್ಲಿ ಮಹಿಳೆಗೆ ರಾಜಕೀಯ ಮೀಸಲಾತಿ ನೀಡಿರುವುದನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ರಾಜಕೀಯ ಮತ್ತು ಸಮಾಜವನ್ನು ಸುಧಾರಿಸಲು ಮಹಿಳೆಯರ ಪಾತ್ರ ಮುಖ್ಯವಾಗಿದೆ. ಕುಟುಂಬ ನಿರ್ವಹಣೆಯಲ್ಲಿ ಮಹಿಳೆ ಸಮರ್ಥಳಿದ್ದಾಗ ಮಾತ್ರ ಸಮಾಜವನ್ನು ತಿದ್ದುವ ಕೆಲಸ ಮಾಡಬಹುದು. ಬಸವ ತತ್ವಗಳನ್ನು ಅಳವಡಿಸಿಕೊಳ್ಳಬೇಕು~ ಎಂದು ಕರೆ ನೀಡಿದರು.

ಚನ್ನಯ್ಯಗಿರಿಯ ಗುರುಬಸವ ಮಹಾಮನೆಯ ಬಸವಾನಂದ ಸ್ವಾಮಿಜಿ, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಬಸವ ಸಮಿತಿ ಉಪಾಧ್ಯಕ್ಷ ಎಚ್.ಎಸ್.ರೇಣುಕಾ ಪ್ರಸಾದ್, ಸ್ನೇಹಾ ಟ್ರಸ್ಟ್ ಅಧ್ಯಕ್ಷೆ ಉಮಾದೇವಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.