ಮಂಗಳವಾರ, ಮೇ 11, 2021
26 °C

ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಬಸವೇಶ್ವರ ಸಾಮಾಜಿಕ ಕ್ರಾಂತಿಯ ಹರಿಕಾರನಾಗಿದ್ದು ಆತನ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಮಾದಿಗ ದಂಡೋರ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಶಂಕರಪ್ಪ ಹೇಳಿದರು.

ಸಮಿತಿಯ ತಾಲ್ಲೂಕು ಶಾಖೆ ಇಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿಯಲ್ಲಿ ಅವರು ಮಾತನಾಡಿದರು.ಪುರಸಭೆ ಮಾಜಿ ಅಧ್ಯಕ್ಷ ಎನ್.ನಾಗರಾಜ್, ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ವಿ.ವಿಜಯ ಕುಮಾರ್, ಮುಖಂಡ ಜಿಯಾ ಉಲ್ಲಾ ಮತ್ತಿತರರು ಮಾತನಾಡಿದರು.ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಟಿ.ಎಸ್.ರಾಜಶೇಖರ್, ವೀರಶೈವ ನೌಕರರ ಸಂಘದ ಅಧ್ಯಕ್ಷ ಡಿ.ಎಸ್.ರಾಜಕುಮಾರ್, ತಾಲ್ಲೂಕು ಬಿಜಿಪಿ ಅಧ್ಯಕ್ಷ ಸಿ.ಮುನಿಯಪ್ಪ ಮತ್ತಿತರರು ಭಾಗವಹಿಸಿದ್ದರು.ತಾಲ್ಲೂಕು ಕಚೇರಿಯಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ತಹಶೀಲ್ದಾರ್ ಬಿ.ಮಲ್ಲಿಕಾರ್ಜುನ ಪುಷ್ಪನಮನ ಸಲ್ಲಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.