ಮಂಗಳವಾರ, ಜೂನ್ 22, 2021
27 °C

ಬಸವ ತತ್ವ ಸಾರ್ವಕಾಲಿಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣರಾಜಪುರ:  `ಬಸವಣ್ಣನವರ ವಚನ ಸಾಹಿತ್ಯದಲ್ಲಿ ಇರುವ ತತ್ವಗಳು ಮತ್ತು ರೇಣುಕಾಚಾರ್ಯರ ಸಿದ್ದಾಂತ ಶಿಖಾಮಣಿ ಗ್ರಂಥದಲ್ಲಿ ಇರುವ ತತ್ವಗಳು ಒಂದಕ್ಕೊಂದು ಪೂರಕವಾಗಿವೆ~ ಎಂದು ಅಕ್ಕಿ ಹಾಲೂರು ಮುತ್ತಿನ ಕಂಥಿನ ಮಠದ ಅಧ್ಯಕ್ಷ ಚಂದ್ರಶೇಖರ ದೇವರು ಅಭಿಪ್ರಾಯಪಟ್ಟರು.ವಿಭೂತಿಪುರ ವೀರಸಿಂಹಾಸನ ಮಠದ ಆವರಣದಲ್ಲಿ ಏರ್ಪಡಿಸಿದ್ದ ರೇಣುಕಾಚಾರ್ಯರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಸಮಾರಂಭದ ಸಾನಿಧ್ಯ ವಹಿಸಿದ್ದ ಮಠದ ಪಟ್ಟಾಧ್ಯಕ್ಷ ಡಾ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, `ಬಸವಣ್ಣನವರ ತತ್ವಗಳು ಎಂದಿಗೂ ಪ್ರಸ್ತುತ~ ಎಂದು ಪ್ರತಿಪಾದಿಸಿದರು.ನಾ ಕು.ಗಣೇಶ್ ಸ್ವರಚಿತ ಕವಿತೆ ವಾಚಿಸಿದರು. ಇದೇ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ವೈಸಿ.ಚೆನ್ನರಸಪ್ಪ ಅವರನ್ನು ಸನ್ಮಾನಿಸಲಾಯಿತು. ಮಠದ ಉಚಿತ ವಿದ್ಯಾರ್ಥಿ ನಿಲಯದ ಮಕ್ಕಳು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಶಿಕ್ಷಕ ನಟರಾಜ್ ಸ್ವಾಗತಿಸಿ, ಸಾಲಿಮಠ ವಂದಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.