ಬಸವ ಪುರಸ್ಕಾರಕ್ಕೆ ಮೇಧಾ ತಿರಸ್ಕಾರ

7

ಬಸವ ಪುರಸ್ಕಾರಕ್ಕೆ ಮೇಧಾ ತಿರಸ್ಕಾರ

Published:
Updated:

ಬೆಳಗಾವಿ: ಕರ್ನಾಟಕದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀಡಿದ್ದ `ಬಸವ ಪುರಸ್ಕಾರ~ ಸ್ವೀಕರಿಸುವುದಿಲ್ಲ ಎಂದು  `ನರ್ಮದಾ ಬಚಾವೋ~ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದರು.ನಗರದಲ್ಲಿ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಈ ರೀತಿ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ~ಬಸವ ಪುರಸ್ಕಾರ ಸ್ವೀಕರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪತ್ರ ಕಳುಹಿಸಲಾಗಿದೆ. ಆದರೆ ಕರ್ನಾಟಕದಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತಡೆಯುವಲ್ಲಿ ಹಾಗೂ ಸರಿಯಾದ ತನಿಖೆ ಕೈಗೊಳ್ಳುವಲ್ಲಿ ವಿಫಲವಾಗಿದೆ. ಆದ್ದರಿಂದ ಪ್ರಶಸ್ತಿಯನ್ನು ಸ್ವೀಕರಿಸುವುದಿಲ್ಲ~ ಎಂದು ಅವರು ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry