ಶನಿವಾರ, ಏಪ್ರಿಲ್ 17, 2021
31 °C

ಬಸ್‌ಗಳ ಡಿಕ್ಕಿ: ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ಎರಡು ಬಸ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ  24 ಮಂದಿ ಗಾಯಗೊಂಡು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಬೆಳಗಿನ ಜಾವ ಸಾಣೀಕೆರೆ ಸಮೀಪದ ರಾಜ್ಯ ಹೆದ್ದಾರಿ-19ರಲ್ಲಿ ನಡೆದಿದೆ. ಬೀದರ್ ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ವಿಆರ್‌ಎಲ್ ಕಂಪೆನಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಬಳ್ಳಾರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ನಡೆದಿದೆ.ಐರಾವತ ಬಸ್ ಚಾಲಕ ಗುರುಸ್ವಾಮಿ (55) ಹಾಗೂ ವಿಆರ್‌ಎಲ್ ಬಸ್ ಪ್ರಯಾಣಿಕರಾದ ಬೀದರ್‌ನ ಸತ್ಯಮ್ಮ (60) ಮೃತ ದುರ್ದೈವಿಗಳು. ಉಳಿದಂತೆ ತೀವ್ರ ಗಾಯಗೊಂಡ 24 ಪ್ರಯಾಣಿಕರಿಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಪಿಎಸ್‌ಐ ಎನ್. ತಿಮ್ಮಣ್ಣ, ವೈ.ಎಸ್. ಚಂದ್ರಶೇಖರ್ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಸ್ಥಗಿತಗೊಂಡಿದ್ದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜ್, ಡಿವೈಎಸ್‌ಪಿ ಹನುಮಂತರಾಯ, ಸಿಪಿಐ ವಾಸುದೇವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.