ಬಸ್‌ಗಳ ಡಿಕ್ಕಿ: 40 ಮಂದಿಗೆ ಗಾಯ

7

ಬಸ್‌ಗಳ ಡಿಕ್ಕಿ: 40 ಮಂದಿಗೆ ಗಾಯ

Published:
Updated:

ವಿರಾಜಪೇಟೆ: ಪಟ್ಟಣದ ಸಮೀಪದ ಚೆಂಬೆಬೆಳ್ಳೂರಿನ ಬಳಿ  ಖಾಸಗಿ ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ತೀವ್ರವಾಗಿ ಗಾಯಗೊಂಡು, 40ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.ಖಾಸಗಿ ಬಸ್ ಚಾಲಕ ಶಿವಣ್ಣ, ಪ್ರಯಾಣಿಕರಾದ ದೇಚಮ್ಮ, ಪೊನ್ನಪ್ಪ ಎಂಬುವವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡವರು ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ವಿರಾಜಪೇಟೆಯಿಂದ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಸಿದ್ದಾಪುರ ಕಡೆಯಿಂದ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಬಸ್‌ ಮುಖಾಮುಖಿ ಡಿಕ್ಕಿಯಾದವು. ಬೆಳಿಗ್ಗೆ ವೇಳೆಯಲ್ಲಿ ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry