ಬಸ್‌ಗೆ ಬೆಂಕಿ: ಪ್ರಯಾಣಿಕರು ಪಾರು

7

ಬಸ್‌ಗೆ ಬೆಂಕಿ: ಪ್ರಯಾಣಿಕರು ಪಾರು

Published:
Updated:

ಹುಬ್ಬಳ್ಳಿ: ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಲಗೇಜುಗಳು ಭಸ್ಮವಾಗಿ, ಪ್ರಯಾಣಿಕರು ಪ್ರಾಣಾ ಯಪಾಯದಿಂದ ಪಾರಾದ ಘಟನೆ ಭಾನುವಾರ ರಾತ್ರಿ ಪಿ.ಬಿ. ರಸ್ತೆಯ ವರೂರ ಬಳಿಯ ವಿಆರ್‌ಎಲ್ ಕಚೇರಿ ಎದುರು ನಡೆದಿದೆ.ನಗರದಿಂದ ಬೆಂಗಳೂರಿಗೆ ಹೊರಟಿದ್ದ ಸ್ಲೀಪರ್ ಕೋಚ್‌ಬಸ್‌ನಲ್ಲಿ ಶಾರ್ಟ್ ಸರ್ಕೀಟ್‌ನಿಂದಾಗಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವೈರುಗಳು ಸುಟ್ಟ ವಾಸನೆ ಚಾಲಕರ ಗಮನಕ್ಕೆ ಬಂದ ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸುತ್ತಿದ್ದಂತೆಯೇ ಬೆಂಕಿ ಪಸರಿಸಿತು. ಕೂಡಲೇ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿತು.ಈ ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಒಂದು ತಾಸಿಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡಬೇಕಾಯಿತು.ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು, ರಸ್ತೆ ಸಂಚಾರವನ್ನು ಸುಗಮಗೊಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry