ಶನಿವಾರ, ಜುಲೈ 24, 2021
27 °C

ಬಸ್‌ನಲ್ಲಿ ಬಂದ ಸಚಿವ ಜೈನ್!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್ ಅವರು ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲು ಬೆಂಗಳೂರಿನಿಂದ ಬಸ್ಸಿನಲ್ಲಿ ಬೆಳಗಾವಿಗೆ ಮಂಗಳವಾರ ಆಗಮಿಸುವ ಮೂಲಕ ಅಚ್ಚರಿ ಮೂಡಿಸಿದರು.ಸೋಮವಾರ ರಾತ್ರಿ ಬೆಂಗಳೂರಿನಿಂದ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್ಸಿನಲ್ಲಿ ಬೆಳಗಾವಿಗೆ ಪ್ರಯಾಣಿಸಿದ ಸಚಿವರು, ಮಂಗಳವಾರ ಬೆಳಿಗ್ಗೆ 7 ಗಂಟೆಗೆ ನಗರದ ಬಸ್ ನಿಲ್ದಾಣಕ್ಕೆ ಆಗಮಿಸಿದರು.ಯಾವುದೇ ಭದ್ರತಾ ಸೌಲಭ್ಯವನ್ನು ಪಡೆಯದೇ, ತಮ್ಮ ಸಂಬಂಧಿಕರ ಮನೆಗೆ ತೆರಳಿ ಉಪಹಾರ ಸೇವಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಎರಡೂವರೆ ಗಂಟೆಗಳ ಕಾಲ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.ಬಸ್ಸಿನಲ್ಲಿ ಆಗಮಿಸಿದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, `ಹಣವನ್ನು ಸುಮ್ಮನೆ ಹಾಳು ಮಾಡಬಾರದು ಎಂದು ಬಸ್ಸಿನಲ್ಲಿ ಬಂದಿದ್ದೇನೆ. ಹೀಗಾಗಿ ಪೊಲೀಸ್ ಎಸ್ಕಾರ್ಟ್ ತೆಗೆದುಕೊಂಡಿಲ್ಲ' ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.